ಆ.16ರಂದು ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

Written by Koushik G K

Published on:

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಶಿವಮೊಗ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ನಗರ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಅಧ್ಯಕ್ಷ ಬಿ. ಕೆ. ಸಂಗಮೇಶ್ವರ ಹಾಗೂ ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಗೌರವ ಅತಿಥಿಗಳಾಗಿರುವರು.

ಸಂಸದರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಭಾಗವಹಿಸಲಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಕೂಡ ಹಾಜರಾಗಲಿದ್ದಾರೆ.

Leave a Comment