ರಿಪ್ಪನ್‌ಪೇಟೆ ; ಪ್ರಾ.ಆ.ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ಡಿಸಿ ದಿಢೀರ್ ಭೇಟಿ, ಪರಿಶೀಲನೆ

Written by Mahesha Hindlemane

Published on:

ಶಿವಮೊಗ್ಗ ; ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1EQnWgfYSt/

ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು.

ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿಗೊಳಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚಿಸಿದರು.

ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1AoU1cVBHt/

ವಿದ್ಯಾರ್ಥಿಗಳೊಂದಿಗೆ ಸಂವಾದ ;

ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಓದಿಗೆ ಪೂರಕವಾದ ವಾತಾವರಣವಿದೆಯೇ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

ಈ ಸಂದರ್ಭದಲ್ಲಿ ಹೊಸನಗರ ತಹಸೀಲ್ದಾರ್ ಭರತ್ ರಾಜ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Leave a Comment