ಹೊಸನಗರ ; ಬಡವರ ಕೂಲಿ ಕಾರ್ಮಿಕರ ರೈತರ ಪೆರವಾಗಿ ನಿಲ್ಲುವುದರ ಜೊತೆಗೆ ಬಡತನದಲ್ಲಿದ್ದರಿಗೆ ದೇವರಂತೆ ಆಗಮಿಸಿ ಸಹಾಯ ಹಸ್ತ ನೀಡುತ್ತಿರುವ ಹೊಸನಗರದ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ರಿಪ್ಪನ್ಪೇಟೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿ 35 ಸೇವೆ ಹಾಗೂ 27 ವರ್ಷಗಳಿಂದ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎಂ.ಎಂ. ಪರಮೇಶ್ರಿಗೆ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯ ಮಟ್ಟದ ತಾಲ್ಲೂಕು ಸಹಕಾರಿ ಪ್ರಸಸ್ತಿ ನೀಡಿ ಗೌರವಿಸಿದೆ.
ನವೆಂಬರ್ 14ರ ಶುಕ್ರವಾರ ಬೆಂಗಳೂರು ಪ್ಯಾಲೇಸ್ ಗ್ರೌಂಡ್ನ ಗಾಯತ್ರಿ ವಿಹಾರ್ನಲ್ಲಿ ರಾಜ್ಯ ಸಹಕಾರ ಮಹಾಮಂಡಲದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಪ್ರಶಸ್ತಿ ಪ್ರದಾನ ಮಾಡಿದರು.

ಎಂ.ಎಂ ಪರಮೇಶ್ ಸಹಕಾರಿ ಕ್ಷೇತ್ರದಲ್ಲಿ ಸುಮಾರು 37 ವರ್ಷಗಳ ಸುದೀಘ್ರ ಸೇವೆ ಸಲ್ಲಿಸಿದ್ದು ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಸಮಾನತೆ, ಸಹಬಾಳ್ವೆ, ಸಹಕಾರ ಮತ್ತು ಸಮರಸತೆಯ ಮೌಲ್ಯಗಳನ್ನು ಜೀವನದ ಅಂಶವನ್ನಾಗಿಸಿಕೊಂಡು ಜೀವನ ಸಾಗಿಸಿದವರು. ಅವರ ಸೇವೆ ಹೊಸನಗರ ತಾಲ್ಲೂಕಿಗೆ ಮಾತ್ರ ಸೀಮಿತವಾಗದೇ ಜಿಲ್ಲಾ ಮಟ್ಟದ ಸಹಕಾರ ಚಟುವಟಿಕೆಗಳಿಗೂ ವಿಸ್ತರಿಸಿದೆ. ಇವರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲಿ ಹಾಗೂ ಸಹಕಾರ ಕ್ಷೇತ್ರದ ಸದಸ್ಯರಿಗೆ ರೈತ ಕುಟುಂಬಕ್ಕೆ ಹೆಚ್ಚಿನ ಸಹಾಯ ಹಸ್ತ ನೀಡಲಿ.
ಎಂ.ಎಂ. ಪರಮೇಶ್ರಿಂದ ಕೃತಜ್ಞತೆ :
ಇವರಿಗೆ ಸಹಕಾರಿ ರತ್ನ ಪ್ರಶಸ್ತಿ ಲಭಿಸಲು ಕಾರಣರಾಗಿರುವ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ, ಹೊಸನಗರ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಸತತ 40 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಯೂನಿಯನ್ ಬ್ಯಾಂಕ್ ಅಧ್ಯಕ್ಷ ವಾಟಗೋಡು ಸುರೇಶ್ ಹಾಗೂ ಈ ಪ್ರಶಸ್ತಿ ಪಡೆಯಲು ಸಹಕರಿಸಿದ ಎಲ್ಲರಿಗೂ ಸಹಕಾರಿ ರತ್ನ ಪ್ರಶಸ್ತಿ ಪಡೆದ ಎಂ.ಎಂ. ಪರಮೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





