ರಿಪ್ಪನ್‌ಪೇಟೆ ; ಸಾಲಬಾಧೆಯಿಂದ ಮನನೊಂದು ರೈತನೋರ್ವ ಕಳೆನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹರತಾಳು ಗ್ರಾಮದಲ್ಲಿ ನಡೆದಿದೆ.
ಹರತಾಳು ಗ್ರಾಮದ ಮಂಜಪ್ಪ ಬಿನ್ ನಾಗನಾಯ್ಕ್ ಮೃತಪಟ್ಟ ವ್ಯಕ್ತಿ. ಕೃಷಿ ಕೆಲಸಕ್ಕಾಗಿ ಹರತಾಳು ಕೃಷಿ ಪತ್ತಿನ ಸಹಕಾರ ಸಂಘದಿಂದ 1.90 ಲಕ್ಷ ರೂ. ಹಾಗೂ ಕೃಷಿ ಕಾರ್ಯಕ್ಕಾಗಿ ಶಿವಮೊಗ್ಗದ ಅದಾನಿ ಫೈನಾನ್ಸ್ ನಲ್ಲಿ 7 ಲಕ್ಷ ರೂ. ಸಾಲ ಮಾಡಿದ್ದರು. ಆದರೆ ಸರಿಯಾದ ಬೆಳೆ ಬಾರದೇ ಸಾಲ ಕಟ್ಟಲು ಆಗದೇ ಬೇಸತ್ತಿದ್ದರು.
ಶನಿವಾರ ಬೆಳಗ್ಗೆ 6 ಗಂಟೆಯಿಂದ ಮನೆ ಪಕ್ಕದಲ್ಲಿರುವ ತನ್ನ ಹಳೆ ಮನೆಯಲ್ಲಿ ಕಳೆನಾಶಕ ಸೇವಿಸಿದ್ದಾರೆ. ಕೂಡಲೇ ಅವರನ್ನು ಆನಂದಪುರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.