ಹೊಸನಗರ ; ಪರವಾನಗಿ ಪಡೆಯದ ವ್ಯಕ್ತಿಗಳಿಂದ ಪತ್ರಬರಹಗಾರರಿಗೆ ತೊಂದರೆಯಾಗುತ್ತಿದೆ ಅಧಿಕೃತ ಪತ್ರ ಬರಹಗಾರರು ಸಾಕಷ್ಟಿದ್ದು ಅವರಿಗೆ ತೊಂದರೆಯಾಗುತ್ತಿದೆ. ಸರ್ಕಾರಗಳು ತಕ್ಷಣ ಅನಧೀಕೃತ ಪತ್ರ ಬರಹಗಾರರನ್ನು ಹೊರಗಿಡಬೇಕು. ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಅನಿವಾರ್ಯ ಎಂದು ಹೊಸನಗರ ತಾಲ್ಲೂಕು ಪತ್ರ ಬರಹಗಾರರ ಸಂಘದ ಅಧ್ಯಕ್ಷ ಎನ್ ಶ್ರೀದರ ಉಡುಪ ಹೇಳಿದರು.
ಹೊಸನಗರದ ಉಪ ನೊಂದಣಾಧಿಕಾರಿಗಳ ಕಛೇರಿಯ ಮುಂಭಾಗ ತಮ್ಮ ಬೇಡಿಕೆಗಾಗಿ ಒಂದು ದಿನದ ಸತ್ಯಾಗ್ರಹ ನಡೆಸಿ ಉಪನೊಂದಣಾಧಿಕಾರಿ ಶಿವಾನಂದ್‌ರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು,
ಪತ್ರ ಬರಹಗಾರರಲ್ಲದ ಹಾಗೂ ಪರವಾನಿಗೆ ಪಡೆಯದ ವ್ಯಕ್ತಿಗಳಿಂದ ಪರವಾನಗಿ ಪಡೆದ ಅಧಿಕೃತ ಪತ್ರ ಬರಹಗಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅಲ್ಲದೇ ದಿನದಿಂದ ದಿನಕ್ಕೆ ಈ ಸಮಸ್ಯೆ ಉಲ್ಬಣವಾಗುತ್ತಿದೆ. ದಿನದಿಂದ ದಿನಕ್ಕೆ ಕಾವೇರಿ 2.0 ತಂತ್ರಾಂಶದಲ್ಲಿ ಸಿಟಿಜನ್ ಲಾಗಿನ್ ಅಳವಡಿಸಲಾಗಿದ್ದು ಇದರ ಮೂಲಕವಾಗಿ ದಸ್ತಾವೇಜುಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲದೇ ಅನಧಿಕೃತ ವ್ಯಕ್ತಿಗಳು ಪತ್ರಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಇದರಿಂದ ವೃತ್ತಿಯನ್ನು ನಂಬಿ ಬದುಕುತ್ತಿರುವ ಅಧಿಕೃತ ಪತ್ರ ಬರಹಗಾರರು ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ಈಗಾಗಲೇ ಈ ಸಂಬಂಧ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಮನವಿ ಸಲ್ಲಿಸಿ ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ ನಮಗೆ ಉಳಿದಿರುವುದು ಹೋರಾಟ ಒಂದೇಯಾಗಿದ್ದು ತಕ್ಷಣ ಮಧ್ಯ ಪ್ರವೇಶಿಸಿ ಸರ್ಕಾರ ನಮ್ಮ ಪರವಾಗಿ ನಿಲ್ಲಬೇಕೆಂದರು.

ಈ ಸಂದರ್ಭದಲ್ಲಿ ಪತ್ರಬರಹಗಾರರ ಸಂಘದ ಅಧ್ಯಕ್ಷ ಎನ್.ಈ ಸ್ವಾಮಿ ನರ‍್ಲೆ ಮಾತನಾಡಿ, ಹೊರ ರಾಜ್ಯಗಳಲ್ಲಿರುವಂತೆ ರಾಜ್ಯದಲ್ಲಿಯೂ ಸಹ ಪತ್ರ ಬರಹಗಾರರಿಗೆ ಪ್ರತ್ಯೆಕ ಲಾಗಿನ್ ನೀಡುವುದು ನೊಂದಣಿಯಾಗುವ ಎಲ್ಲಾ ದಸ್ತಾವೇಜುಗಳಿಗೆ ಕಡ್ಡಾಯವಾಗಿ ಅಧಿಕೃತ ಪತ್ರ ಬರಹಗಾರರ ಅಥವಾ ವಕೀಲರ ಬಿಕ್ಕಲಂ ಕಡ್ಡಾಯಗೊಳಿಸುವುದು ಅಧಿಕೃತ ಪತ್ರ ಬರಹಗಾರರಿಗೆ ಏಕರೂಪದ ಅಧಿಕೃತ ಗುರುತಿನ ಚೀಟಿ ನೀಡುವುದು ಹಾಗೂ ಪತ್ರಬರಹಗಾರರ ಹೆಸರಿನಲ್ಲಿ ಇಲಾಖೆಗೆ ಬರುವ ಅನಧೀಕೃತ ವ್ಯಕ್ತಿಗಳಿಗೆ ಕಡಿವಾಣ ಬೇಕು ಎಂದು ಈಗ ನಡೆಯುತ್ತಿರುವ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಎಂದು ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.
ಈ ಪ್ರತಿಭಟನೆ ಧರಣಿಯಲ್ಲಿ ಅಧ್ಯಕ್ಷ ಎನ್ ಶ್ರೀಧರ ಉಡುಪ, ಉಪಾಧ್ಯಕ್ಷ ಎನ್.ಈ ಸ್ವಾಮಿ ನರ‍್ಲೆ, ಕಾರ್ಯದರ್ಶಿ ಹಾಲಂದೂರು ರಾಜಶೇಖರಗೌಡ, ಖಜಾಂಚಿ ಡಿ ಪ್ರವೀಣ್ ಕುಮಾರ್, ಸದಸ್ಯರಾದ ಎಲ್ ವೆಂಕಟೇಶ್, ಕೆ.ಪಿ ಧರ್ಮಯ್ಯಗೌಡ, ಲಾರೇನ್ಸ್ ಬಾಂಜ್, ಸತ್ಯನಾರಾಯಣ, ಸುಕನ್ಯಾ, ಬಿ.ಡಿ ಜಾನಕಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





