ಹೊಸನಗರ

‘ಬಸವ ಮಂಟಪ’ ಕೃತಿಕಾರ ರವಿ ಹಂಜ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹ

ಲೇಖಕ ರವಿ ಹಂಜ್ ಅವರ ಹೇಳಿಕೆಗಳು ಹಾಗೂ 'ಬಸವ ಮಂಟಪ' ಕೃತಿಗೆ ಸಂಬಂಧಿಸಿದಂತೆ ವ್ಯಕ್ತವಾಗಿರುವ ಆಕ್ಷೇಪಣೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಿ, ಲಭ್ಯವಿರುವ ದಾಖಲೆ ಮತ್ತು ಸಾಕ್ಷ್ಯಗಳ ಆಧಾರದಲ್ಲಿ ಸಮಗ್ರ ತನಿಖೆ ನಡೆಸಲು ಆಗ್ರಹಿಸಲಾಗಿದೆ.

Mulegadde Sri

ರಿಪ್ಪನ್‌ಪೇಟೆ: ಲೇಖಕ ರವಿ ಹಂಜ್ ಅವರ ಹೇಳಿಕೆಗಳು ಹಾಗೂ ‘ಬಸವ ಮಂಟಪ’ ಕೃತಿಗೆ ಸಂಬಂಧಿಸಿದಂತೆ ವ್ಯಕ್ತವಾಗಿರುವ ಆಕ್ಷೇಪಣೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಿ, ಲಭ್ಯವಿರುವ ದಾಖಲೆ ಮತ್ತು ಸಾಕ್ಷ್ಯಗಳ ಆಧಾರದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಅವರು ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕ್ರಾಂತಿಕಾರಿ ಪುರುಷ, ಸಮಾಜ ಸುಧಾರಕ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು ಮತ್ತು ವೀರಶೈವ ಲಿಂಗಾಯತ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎನ್ನಲಾದ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಈ ಕೃತಿಯನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಬೇಕು” ಎಂದು ಒತ್ತಾಯಿಸಿದರು.


ಧಾರ್ಮಿಕ ಭಾವನೆಗೆ ಧಕ್ಕೆ: ಕೃತಿಕಾರನ ಮೇಲೆ ಕ್ರಮಕ್ಕೆ ವೀರಶೈವ ಲಿಂಗಾಯತ ಸಮಾಜ ಒತ್ತಾಯ

ರಿಪ್ಪನ್‌ಪೇಟೆ: ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು ಹಾಗೂ ವೀರಶೈವ ಲಿಂಗಾಯತರನ್ನು ಅವಹೇಳನ ಮಾಡುವ ಮೂಲಕ ಸಮುದಾಯದಲ್ಲಿ ಅಶಾಂತಿಯನ್ನುಂಟು ಮಾಡಿರುವ ‘ಬಸವ ಮಂಟಪ’ ಕೃತಿಯ ರಚನಾಕಾರ ರವಿ ಹಂಜ್ ವಿರುದ್ಧ ಸರ್ಕಾರ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಮತ್ತು ಅವರ ಕೃತಿಯನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೊಸನಗರ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಂ.ಎಸ್. ಉಮೇಶ್ ಆಗ್ರಹಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳ ಮೂಲಕ ಲಿಂಗಾಯತ ಧರ್ಮದ ನಂಬಿಕೆ, ಶ್ರದ್ಧೆ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾದ ಸುಳ್ಳು ಹಾಗೂ ಅವೈಜ್ಞಾನಿಕ ವಿಚಾರಗಳನ್ನು ಪ್ರಚುರಪಡಿಸಲಾಗುತ್ತಿದೆ. ಇದರಿಂದ ಬಸವ ಭಕ್ತರು ಮತ್ತು ಲಿಂಗಾಯತ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಘಾಸಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು, ರವಿ ಹಂಜ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಮುಖ್ಯಮಂತ್ರಿಗಳಿಗೆ ಪತ್ರಿಕಾ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]