ಹೊಸನಗರ

ಅಕ್ರಮ ಕಲ್ಲುಗಣಿಗಾರಿಕೆ ತಡೆಗೆ ಆಗ್ರಹ: ಹೊಸನಗರ ತಹಸೀಲ್ದಾರ್‌ಗೆ ಗ್ರಾಮಸ್ಥರಿಂದ ಮನವಿ

ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಜಿಲಿಟಿನ್ ಕಡ್ಡಿ ಬಳಸಿ ಕಲ್ಲು ಒಡೆಯುವುದನ್ನು ತಕ್ಷಣ ತಡೆದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಹೊಸನಗರ ತಹಸೀಲ್ದಾರ್ ಭರತ್ ರಾಜ್ ರವರಿಗೆ ದೂರು ಸಲ್ಲಿಸಿದ್ದಾರೆ.

ಅಕ್ರಮ ಕಲ್ಲುಗಣಿಗಾರಿಕೆಗೆ ತಡೆಗೆ ಆಗ್ರಹ Stone

ಹೊಸನಗರ: ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲಗೇರಿ ಮಜರೆ ಸರ್ವೇ ನಂಬರ್ 20ರಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಜಿಲಿಟಿನ್ ಕಡ್ಡಿ ಬಳಸಿ ಕಲ್ಲು ಒಡೆಯುವುದನ್ನು ತಕ್ಷಣ ತಡೆದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಹೊಸನಗರ ತಹಸೀಲ್ದಾರ್ ಭರತ್ ರಾಜ್ ರವರಿಗೆ ದೂರು ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಅಕ್ರಮ ಗಣಿಗಾರಿಕೆಗೆ ಯಂತ್ರೋಪಕರಣಗಳನ್ನು ಬಳಸುತ್ತಿರುವುದರಿಂದ ವ್ಯಾಪಕ ಧೂಳು, ಶಬ್ದ ಮತ್ತು ಕಂಪನ ಉಂಟಾಗುತ್ತಿದ್ದು, ಇದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ವೃದ್ಧರ ಆರೋಗ್ಯಕ್ಕೆ ತೀವ್ರ ತೊಂದರೆಯಾಗಿದೆ. ಕೃಷಿ ಜಮೀನುಗಳು, ಮನೆಗಳು, ಶಾಲಾ ಕಟ್ಟಡಗಳು, ರಸ್ತೆಗಳು ಹಾಗೂ ಕುಡಿಯುವ ನೀರಿನ ಮೂಲಗಳು ಹಾನಿಗೊಳಗಾಗಿವೆ. ಮಳೆಗಾಲದಲ್ಲಿ ಮಣ್ಣು ಕುಸಿತದ ಭೀತಿ ಎದುರಾಗಿದ್ದು, ಭೂಮಿಯ ನೈಸರ್ಗಿಕ ಸ್ವರೂಪವೇ ಬದಲಾಗುತ್ತಿದೆ.

ಅಲ್ಲದೆ, ಈ ಪ್ರದೇಶದ ಸಮೀಪದಲ್ಲೇ ಇತಿಹಾಸ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಬಡ ಕೂಲಿ ಕಾರ್ಮಿಕರ ವಸತಿ ಪ್ರದೇಶಗಳಿದ್ದು, ಭಾರೀ ವಾಹನಗಳ ಸಂಚಾರದಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ ಮತ್ತು ಅಪಘಾತದ ಅಪಾಯ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಗ್ರಾಮಸ್ಥರ ಪ್ರಮುಖ ಬೇಡಿಕೆಗಳು:

  • ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಸ್ಥಳವನ್ನು ಪರಿಶೀಲಿಸಬೇಕು.
  • ಅಗತ್ಯ ಪರವಾನಗಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಗಣಿಗಾರಿಕೆ ಸ್ಥಗಿತಗೊಳಿಸಬೇಕು.
  • ಅಕ್ರಮಕ್ಕೆ ಬಳಸಲಾಗುತ್ತಿರುವ ಯಂತ್ರೋಪಕರಣಗಳು ಹಾಗೂ ಸಾಮಗ್ರಿಗಳನ್ನು ಜಪ್ತಿ ಮಾಡಬೇಕು.
  • ಇಲ್ಲಿಯವರೆಗೆ ಹೊರತೆಗೆಯಲಾದ ಕಲ್ಲಿನ ಪ್ರಮಾಣವನ್ನು ಅಂದಾಜಿಸಿ, ಸರ್ಕಾರಕ್ಕಾದ ನಷ್ಟವನ್ನು ದಂಧೆಕೋರರಿಂದ ಭರಿಸಬೇಕು ಹಾಗೂ ದಂಡಾತ್ಮಕ ಕ್ರಮ ಜರುಗಿಸಬೇಕು.
  • ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶವನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳಬೇಕು ಮತ್ತು ಸ್ಥಳ ಪರಿಶೀಲನೆ ವೇಳೆ ಗ್ರಾಮಸ್ಥರ ಅಹವಾಲು ಆಲಿಸಬೇಕು.
  • ಈ ದೂರಿನ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅರ್ಜಿದಾರರಿಗೆ ಲಿಖಿತ ಮಾಹಿತಿ ನೀಡಬೇಕು.
  • ಸಾರ್ವಜನಿಕ ಹಿತಾಸಕ್ತಿ, ಪರಿಸರ ಹಾಗೂ ಕೃಷಿ ಭೂಮಿಯ ರಕ್ಷಣೆಯ ದೃಷ್ಟಿಯಿಂದ ಈ ದೂರು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ವಿವಿಧ ಹಂತದ ಅಧಿಕಾರಿಗಳಿಗೆ ಪ್ರತಿ ಸಲ್ಲಿಕೆ:

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಆಗ್ರಹಿಸಿ ಅರ್ಜಿಯ ಪ್ರತಿಯನ್ನು ಮುಖ್ಯಮಂತ್ರಿಗಳು, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಶಿವಮೊಗ್ಗ ಜಿಲ್ಲಾಧಿಕಾರಿ, ರಾಜ್ಯ ಡಿಜಿ-ಐಜಿಪಿ ಹಾಗೂ ಕರ್ನಾಟಕ ಲೋಕಾಯುಕ್ತಕ್ಕೂ ಮಾಹಿತಿಗಾಗಿ ರವಾನಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!