ಹೊಸನಗರ

ಮಲೆನಾಡಿನಲ್ಲಿ ಮಳೆ ಕೊರತೆ: ಹೊಸನಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲ್ಲೂಕಿನಲ್ಲಿ 2026ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯುಂಟಾಗಿದ್ದು, ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ತಕ್ಷಣವೇ 'ಬರಪೀಡಿತ ಪ್ರದೇಶ' ಎಂದು ಘೋಷಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮ್ಯಾಮ್‌ಕೋಸ್ ನಿರ್ದೇಶಕ ಹಾಗೂ ಹೊಸನಗರ ಕೃಷಿಕ ಸಮಾಜದ ಉಪಾಧ್ಯಕ್ಷ ಧರ್ಮೇಂದ್ರ ಹೆಚ್. ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

InShot 20260909 073344992

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಹೊಂದಿರುವ ಹೊಸನಗರ ತಾಲ್ಲೂಕಿನಲ್ಲಿ 2026ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯುಂಟಾಗಿದ್ದು, ಭೀಕರ ಬರಗಾಲದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕನ್ನು ತಕ್ಷಣವೇ ‘ಬರಪೀಡಿತ ಪ್ರದೇಶ’ ಎಂದು ಘೋಷಿಸಬೇಕು ಹಾಗೂ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮ್ಯಾಮ್‌ಕೋಸ್ ನಿರ್ದೇಶಕ ಹಾಗೂ ಹೊಸನಗರ ಕೃಷಿಕ ಸಮಾಜದ ಉಪಾಧ್ಯಕ್ಷ ಧರ್ಮೇಂದ್ರ ಹೆಚ್. ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಒಣಗುತ್ತಿರುವ ಬೆಳೆಗಳು:

📢 Stay Updated! Join our WhatsApp Channel Now →

ಮಳೆಯಿಲ್ಲದೆ ರೈತರು ನಾಟಿ ಮಾಡಿದ್ದ ಭತ್ತದ ಪೈರುಗಳು ಒಣಗುತ್ತಿವೆ. ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಕಷ್ಟಪಟ್ಟು ಬೆಳೆಸಿದ ಅಡಿಕೆ ಮರಗಳು ಕೂಡ ತೇವಾಂಶವಿಲ್ಲದೆ ಬಾಡುತ್ತಿವೆ.

ನೀರು ಮತ್ತು ಮೇವಿನ ಅಭಾವ:

ಸೆಪ್ಟೆಂಬರ್ ತಿಂಗಳು ಬಂದರೂ ವಾಡಿಕೆಯಷ್ಟು ಮಳೆಯಾಗಿಲ್ಲ. ಇದರಿಂದಾಗಿ ಹಳ್ಳ-ಕೊಳ್ಳ, ಕೆರೆ-ಕಟ್ಟೆಗಳು ಬರಿದಾಗಿದ್ದು, ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ತೀವ್ರ ಕೊರತೆ ಎದುರಾಗುವ ಆತಂಕ ಸೃಷ್ಟಿಯಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬರಪೀಡಿತ ಪ್ರದೇಶ ಘೋಷಿಸಲು ಆಗ್ರಹ:

ಮುಂಬರುವ ಜಲಕಂಟಕವನ್ನು ತಪ್ಪಿಸಲು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ನೀಡಲು, ಸರ್ಕಾರ ಕೂಡಲೇ ಹೊಸನಗರವನ್ನು ಬರಪೀಡಿತ ತಾಲ್ಲೂಕು ಎಂದು ಅಧಿಕೃತವಾಗಿ ಘೋಷಿಸಿ ಪರಿಹಾರ ವಿತರಿಸಬೇಕು.

ಗುಟ್ಕಾ ನಿಷೇಧ ಹಿಂಪಡೆಯಿರಿ:

ಮಾರುಕಟ್ಟೆಯಲ್ಲಿ ದಿನೇ ದಿನೇ ಅಡಿಕೆ ಬೆಲೆ ಕುಸಿಯುತ್ತಿರುವುದರಿಂದ ಬೆಳೆಗಾರರು ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಗುಟ್ಕಾ ಮೇಲಿರುವ ನಿಷೇಧವನ್ನು ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]