Ripponpete

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ ಹಾಗೂ ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಡಿ.ಈ.ಮಧುಸೂಧನ್ ಹಾಗೂ ಹರೀಶ್ ಪ್ರಭು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಳೂರು ಗೋಪಾಲಕೃಷ್ಣ ಅವರು ಮೂರು ಬಾರಿ ಶಾಸಕರಾಗಿದ್ದಾರೆ. ಕ್ಷೇತ್ರದಲ್ಲಿ ಅಪಾರ ಜನಮನ್ನಣೆಗಳಿಸಿದ್ದಾರೆ. ಪ್ರಮುಖವಾಗಿ ವಿರೋಧ ಪಕ್ಷ ಬಿಜೆಪಿಯನ್ನು ಸಾಮರ್ಥ್ಯದಿಂದ ಎದುರಿಸುವ ನಾಯಕತ್ವ ಹೊಂದಿದ್ದಾರೆ.

ಮಲೆನಾಡಿನಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ ಈ ಸಮಸ್ಯೆಗಳನ್ನು ಪರಿಹರಿಸಬೇಕಾದರೆ ಬೇಳೂರು ಅವರ ನಾಯಕತ್ವ ಬೇಕೇ ಬೇಕಾಗಿದೆ. ಆ ಕಾರಣದಿಂದಾಗಿ ಡಿ.ಕೆ.ಶಿವಕುಮಾರ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲೇಬೇಕು ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]