Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !

Written by malnadtimes.com

Published on:

SAGARA | ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಮಹಾಮಾರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರನೋರ್ವ ಬಲಿಯಾದ ಘಟನೆ ಶಿವಮೊಗ್ಗ (Shivamogga)ದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

Read More:Karnataka Rain | ಇನ್ನೂ ಮೂರು ದಿನ ಮಳೆ ಮುಂದುವರಿಕೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ತಾಲೂಕಿನ ತಾಳಗುಪ್ಪದ ನಿವಾಸಿ ನಾಗರಾಜ್ (33) ಮೃತ ಯುವಕ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ನಾಗರಾಜ್ ಎರಡು ದಿನಗಳ ಹಿಂದೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗಿನಜಾವ ನಾಗರಾಜ್ ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರದ ಲಕ್ಷಣಗಳು :

ಡೆಂಗ್ಯೂ ಜ್ವರವು ಸಾಮಾನ್ಯವಾಗಿ ಜ್ವರದ ಲಕ್ಷಣಗಳನ್ನು ತೋರಿಸುತ್ತದೆ, ಉದಾಹರಣೆಗೆ ಹೇಳುವುದಾದರೆ ಹೆಚ್ಚಿನ ಮೈ ಬಿಸಿ (ತಾಪಮಾನ) ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಸೌಮ್ಯ ರಕ್ತಸ್ರಾವ. ಕೆಲವು ಸಂದರ್ಭಗಳಲ್ಲಿ ಇದು ಡೆಂಗ್ಯೂ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು. ಡೆಂಗ್ಯೂಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ, ಆದರೆ ರೋಗಲಕ್ಷಣಗಳ ಬೆಂಬಲ ಮತ್ತು ನಿರ್ವಹಣೆ ಮುಖ್ಯವಾಗಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದು ಮತ್ತು ಸೊಳ್ಳೆ ಕಡಿತದಿಂದ ರಕ್ಷಣೆ ಮಾಡಿಕೊಳ್ಳುವುದು ಮಹತ್ವದ ವಿಷಯಗಳಾಗಿವೆ. ವಿಶ್ವದಾದ್ಯಂತ ಲಕ್ಷಾಂತರ ಮಂದಿ ಪ್ರತಿ ವರ್ಷ ಡೆಂಗ್ಯೂ ಜ್ವರದ ಸೋಂಕಿಗೆ ಗುರಿಯಾಗುತ್ತಿದ್ದಾರೆ.

ಡೆಂಗ್ಯೂ ಜ್ವರ ಬಂದ ತಕ್ಷಣ ಮಕ್ಕಳು ಅಥವಾ ದೊಡ್ಡವರು ಯಾವುದೇ ರೋಗ ಲಕ್ಷಣಗಳನ್ನು ತೋರಿಸುವುದಿಲ್ಲ. ವೈರಸ್ಸಿನ ಸೋಂಕು ಉಂಟಾದ ನಾಲ್ಕರಿಂದ ಏಳು ದಿನಗಳ ನಂತರ ಲಕ್ಷಣಗಳು ಪ್ರಾರಂಭವಾಗುತ್ತವೆ. ಡೆಂಗ್ಯೂ ಜ್ವರ ದೇಹದ ತಾಪಮಾನ 104 ಡಿಗ್ರಿ ಫ್ಯಾರನ್ ಹೀಟ್ ಇರುತ್ತದೆ. ಜೊತೆಗೆ ತಲೆ ನೋವು, ಹೊಟ್ಟೆ, ಮೈಕೈ ನೋವು, ವಾಕರಿಕೆ, ಕಣ್ಣುಗಳ ಹಿಂಭಾಗದಲ್ಲಿ ನೋವು, ವಾಂತಿ, ಗ್ರಂಥಿಗಳು ಊತ ಮತ್ತು ಮೈಮೇಲೆ ಕಲೆಗಳೂ ಕಾಣಿಸಿಕೊಳ್ಳಬಹುದು. ಯಾರಲ್ಲಿ ರೋಗ ನಿರೋಧಕ ವ್ಯವಸ್ಥೆ (ಅಂದರೆ ಇಮ್ಯುನಿಟಿ) ಬಲವಾಗಿರುವವರು ಕೇವಲ ಒಂದು ಅಥವಾ ಎರಡು ವಾರಗಳಲ್ಲಿ ಈ ಸಮಸ್ಯೆಯಿಂದ ಪಾರಾಗುತ್ತಾರೆ. ಕೆಲವರಿಗೆ ಗಂಭೀರ ಸಮಸ್ಯೆಗಳು ಉಂಟಾಗಬಹುದು. ಮೂರು ದಿನಗಳ ಕಾಲ ನಿರಂತರವಾಗಿ ಜ್ವರ, ಮೈಕೈ ನೋವು ಕಾಡಿದರೆ ತಕ್ಷಣ ವೈದ್ಯರಿಗೆ ತೋರಿಸಬೇಕು. ಆಸ್ಪತ್ರೆಗೆ ದಾಖಲಾಗಬೇಕು ಎಂದು ವೈದ್ಯರು ಸಲಹೆ ನೀಡಿದರೆ ದಾಖಲಾಗಿ ಸೂಕ್ತ ಔಷಧಿ ಮತ್ತು ಚಿಕಿತ್ಸೆ ಪಡೆಯಬೇಕು.

Read More:Karnataka Rain | ಇನ್ನೂ ಮೂರು ದಿನ ಮಳೆ ಮುಂದುವರಿಕೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Leave a Comment