Hosanagara

ಬ್ರಾಹ್ಮಣ ಸಮುದಾಯದ ವಿರುದ್ಧ ಸಿಗಂದೂರು ಧರ್ಮದರ್ಶಿ ರಾಮಪ್ಪನವರಿಂದ ಅವಹೇಳನಕಾರಿ ಹೇಳಿಕೆ ; ಸೂಕ್ತ ಕ್ರಮಕ್ಕೆ ಒತ್ತಾಯ

ಹೊಸನಗರ ; ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊಸನಗರ ಮಹಾ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರದ ತಾಲ್ಲೂಕು ಕಛೇರಿಯ ಆವರಣದಲ್ಲಿ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರಿಗೆ ಬ್ರಾಹ್ಮಣ ಸಮುದಾಯದಿಂದ ಮನವಿ ಪತ್ರ ಸಲ್ಲಿಸಿ ಹೊಸನಗರ ತಾಲ್ಲೂಕು ಬ್ರಾಹ್ಮಣ ಮಹಾ ಸಂಘದ ಕಾರ್ಯದರ್ಶಿ ಭೋಜರಾವ್ ಆರ್‌ ಮಾತನಾಡಿ, ಹೊನ್ನಾವರ ತಾಲ್ಲೂಕಿನ ಮಾಳ್ಕೋಡು ಗ್ರಾಮದ ರಾಮಮಂದಿರ ಪ್ರತಿಷ್ಠಾನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ವಿವೇಚನಾ ಪೂರ್ವಕವಾಗಿ ನಾಡಿನ ಸಮಸ್ತ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡುವ ಉದ್ದೇಶದಿಂದ ಹಲವು ಬಾರಿ ಭಟ್ಟ, ಮುಂಡೆ ಮಕ್ಕಳು, ಮಾಡ್ತವೆ ಬ್ರಾಹ್ಮಣರು ಸಗಣಿ ಹುಳುವಾಗಿ ಸಾಯ್ತಾರೆ ಎಂದು ಇತ್ಯಾದಿ ಪದಗಳಿಂದ ನಿಂದಿಸಿದ್ದು ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಇಲ್ಲವಾದರೇ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬ್ರಾಹ್ಮಣ ಮಹಾ ಸಂಘದ ವತಿಯಿಂದ ಹೋರಾಟ ಅನಿವಾರ್ಯ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದು ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಂಡರು.

ಮನವಿ ಪತ್ರ ನೀಡುವ ಸಂದರ್ಭದಲ್ಲಿ ಬ್ರಾಹ್ಮಣ ಮಹಾ ಸಂಘದ ಅಧ್ಯಕ್ಷ ಡಾ. ರಾಮಚಂದ್ರರಾವ್, ಕೋಶಾಧಿಕಾರಿ ಎನ್ ಶ್ರೀಧರ ಉಡುಪ, ದತ್ತಾತ್ರೇಯ ಉಡುಪ, ಕಾರ್ಯದರ್ಶಿ ಹರೀಶ್ ಹೆಚ್.ಕೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>