Shivamogga | ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಗುರುವಾರ ನಡೆದಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ (Dr. Dhananjaya Sarji) ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ.
ಯಾವ ಅಭ್ಯರ್ಥಿಗೆ ಎಷ್ಟು ಮತ ?




ತಡ ರಾತ್ರಿವರೆಗೆ ಮತ ಎಣಿಕೆ ಕಾರ್ಯ ನಡೆದಿದ್ದು ಮತ ಎಣಿಕೆ ಕೇಂದ್ರದ ಹೊರಗೆ ಪಕ್ಷಗಳ ಕಾರ್ಯಕರ್ತರು, ಅಭಿಮಾನಿಗಳು ಕಾದು ನಿಂತಿದ್ದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಮತ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬ್ಯಾರಿಕೇಡ್ ಅಳವಡಿಸಲಾಗಿದ್ದು ಎಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

‘ಪದವೀಧರರ ಪ್ರತಿನಿಧಿಯಾಗಿ ಕೆಲಸ ಮಾಡಲು ನನ್ನನ್ನು ಆರಿಸಿದ ಎಲ್ಲ ಮತದಾರ ಬಂಧುಗಳಿಗೂ ನನ್ನ ಮನದಾಳದ ಧನ್ಯವಾದಗಳು. ನಿಮ್ಮ ನಂಬಿಕೆಯನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇನೆ.’
– ಡಾ. ಧನಂಜಯ ಸರ್ಜಿ

