ಹೊಸನಗರ

ಹೊಸನಗರ ಕಳೂರು ರಾಮೇಶ್ವರ ಸಹಕಾರಿ ಸಂಘಕ್ಕೆ ವಜ್ರ ಮಹೋತ್ಸವ ; ಸೆ.25ರಂದು ₹2.41 ಕೋಟಿ ವೆಚ್ಚದ ನೂತನ ಕಟ್ಟಡ, ಉಗ್ರಾಣಗಳ ಉದ್ಘಾಟನೆ

ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸೆಪ್ಟೆಂಬರ್ 25ರಂದು ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಳೂರು ರಾಮೇಶ್ವರ ಸಹಕಾರಿ ಸಂಘಕ್ಕೆ ವಜ್ರ ಮಹೋತ್ಸವ Kalur

ಹೊಸನಗರ: ತಾಲೂಕಿನ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸೆಪ್ಟೆಂಬರ್ 25ರಂದು ವಜ್ರ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಅಂಗವಾಗಿ ಸುಮಾರು ₹2.41 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂಘದ ನೂತನ ಕಟ್ಟಡ ಹಾಗೂ ವಿವಿಧ ಉಗ್ರಾಣಗಳ ಉದ್ಘಾಟನೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ದುಮ್ಮ ವಿನಯ್ ಕುಮಾರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇಲ್ಲಿನ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸಂಘದ ಕಟ್ಟಡವನ್ನು ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಲಿದ್ದಾರೆ. ಕಟ್ಟಡದ ಶಿಲಾಫಲಕವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ ಎಂದರು.

ರಸಗೊಬ್ಬರ ಉಗ್ರಾಣವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಪಡಿತರ ಹಾಗೂ ಕೃಷಿ ಉಪಕರಣಗಳ ಉಗ್ರಾಣವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದಾರೆ. ಸಾಮಾನ್ಯ ಸೇವಾ ಕೇಂದ್ರವನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ವೇದಿಕೆ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

79 ವರ್ಷಗಳ ಸಹಕಾರ ಸೇವೆ :

ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 1947ರಲ್ಲಿ ಹಿರಿಯ ಸಹಕಾರಿಗಳ ಪರಿಶ್ರಮ ಹಾಗೂ ಆಶೀರ್ವಾದದೊಂದಿಗೆ ಸ್ಥಾಪನೆಯಾಗಿದೆ. ಆರಂಭದಲ್ಲಿ ಸಂಘದ ಷೇರು ಬಂಡವಾಳ ₹5 ಸಾವಿರವಾಗಿದ್ದು, ಎ.ಎನ್. ರಾಮಸ್ವಾಮಿ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದುವರೆಗೆ 10 ಮಂದಿ ಅಧ್ಯಕ್ಷರು ಸಂಘದ ಆಡಳಿತದ ಹೊಣೆ ನಿರ್ವಹಿಸಿದ್ದಾರೆ.

ಸದ್ಯ ಸಂಘವು ಹೊಸನಗರ ತಾಲೂಕಿನ 40 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದ್ದು, 2,678 ಸದಸ್ಯರನ್ನು ಒಳಗೊಂಡಿದೆ. ಕೃಷಿ ಕ್ಷೇತ್ರಕ್ಕೆ ಶೂನ್ಯ ಬಡ್ಡಿದರದಲ್ಲಿ ₹11.23 ಕೋಟಿಯಷ್ಟು ಸಾಲ ವಿತರಿಸಲಾಗಿದೆ. ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗಾಗಿ 1,251 ಸದಸ್ಯರಿಗೆ ಒಟ್ಟು ₹13.12 ಕೋಟಿ ಸಾಲ ಒದಗಿಸಲಾಗಿದೆ ಎಂದು ವಿನಯ್ ಕುಮಾರ್ ತಿಳಿಸಿದರು.

ರಸಗೊಬ್ಬರ ಹಾಗೂ ಕೀಟನಾಶಕಗಳ ಮಾರಾಟದಲ್ಲಿಯೂ ಸಂಘ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯಲ್ಲಿ ಮುಂಚೂಣಿಯ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ. ವಾರ್ಷಿಕವಾಗಿ ಸುಮಾರು ₹107 ಕೋಟಿಯಷ್ಟು ವಹಿವಾಟು ನಡೆಸುತ್ತಿರುವ ಸಂಘ ಆರ್ಥಿಕವಾಗಿ ಸದೃಢವಾಗಿದೆ. 2026ರ ಅಂತ್ಯಕ್ಕೆ ₹11.31 ಲಕ್ಷ ಲಾಭ ಗಳಿಸಿದೆ ಎಂದು ಅವರು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸದಸ್ಯರಿಂದ ₹8.48 ಕೋಟಿಯಷ್ಟು ಠೇವಣಿ ಸಂಗ್ರಹಿಸಲಾಗಿದ್ದು, ಸಂಘದ ಸ್ವಂತ ಬಂಡವಾಳದ ಮೂಲಕವೂ ಸದಸ್ಯರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.

ಹಿರಿಯ ಸದಸ್ಯರಿಗೆ ಸನ್ಮಾನ :

ವಜ್ರ ಮಹೋತ್ಸವದ ಅಂಗವಾಗಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಷೇರುದಾರ ಸದಸ್ಯರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 25ರಂದು ನಡೆಯುವ ಕಾರ್ಯಕ್ರಮಕ್ಕೆ ಸಂಘದ ಎಲ್ಲ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ದುಮ್ಮ ವಿನಯ್ ಕುಮಾರ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಹೆಚ್. ಶ್ರೀನಿವಾಸ್, ಮುರುಳಿಧರ ಹತ್ವಾರ್, ಚಿನ್ನಪ್ಪ, ಹೂವಪ್ಪ, ವಿರೂಪಾಕ್ಷಪ್ಪ, ಗುಬ್ಬಿಗಾ ರವಿ ಹಾಗೂ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650