ಶಿವಮೊಗ್ಗ

ಈ ತಿಂಗಳಿಂದ ತಲಾ 10 ಕೆ.ಜಿ. ಪಡಿತರ ಅಕ್ಕಿ ವಿತರಣೆ

ಶಿವಮೊಗ್ಗ ; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಮತ್ತು ಆದ್ಯತಾ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಹಣ ವರ್ಗಾಯಿಸಲಾಗುತ್ತಿದ್ದು, ಫೆಬ್ರವರಿ-2025 ರಿಂದ ಜಾರಿಗೆ ಬರುವಂತೆ 5 ಕೆ.ಜಿ. ಅಕ್ಕಿಯನ್ನು ಮಾರ್ಚ್-2025ರ ಮಾಹೆಯ ಪಡಿತರ ವಿತರಣೆಯೊಂದಿಗೆ ಸೇರಿಸಿ ವಿತರಿಸಲು ಸರ್ಕಾರವು ಆದೇಶಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಂತ್ಯೋದಯ ಪಡಿತರ ಚೀಟಿಗೆ ಕೇಂದ್ರದಿಂದ 3 ಸದಸ್ಯರವರೆಗಿನ ಪಡಿತರ ಚೀಟಿಗೆ 35 ಕೆ.ಜಿ. ಹಾಗೂ ರಾಜ್ಯದಿಂದ 4 ಸದಸ್ಯ ಮೇಲ್ಪಟ್ಟು ಒಬ್ಬರಿಗೆ 10 ಕೆ.ಜಿ.ಯಂತೆ ಹಾಗೂ ಆದ್ಯತಾ ಪಡಿತರ ಚೀಟಿಗೆ ಪ್ರತಿ ಸದಸ್ಯರಿಗೆ ಕೇಂದ್ರದಿಂದ ತಲಾ 5 ಕೆ.ಜಿ. ಹಾಗೂ ರಾಜ್ಯದಿಂದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿಯನ್ನು ಮಾರ್ಚ್-2025ರ ಮಾಹೆಗೆ ಮಾತ್ರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>