ಡಾ. ಸರ್ಜಿ ಹೆಸರಲ್ಲಿ ಕಹಿ ಭರಿತ ಸ್ವೀಟ್ ಕಳಿಸಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ನಿಯೋಗ ಮನವಿ

Written by malnadtimes.com

Published on:

SHIVAMOGGA ; ಅನಾಮಧೇಯ ವ್ಯಕ್ತಿಯೊಬ್ಬ ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ ಮೂವರು ಗಣ್ಯರಿಗೆ ಕಳಿಸಿದ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಿಖೆ ಚುರುಕುಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮುಖಂಡರ ನಿಯೋಗ ಇಂದು ಎಸ್.ಪಿ. ಗೆ ಮನವಿ ಸಲ್ಲಿಸಿದೆ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ https://www.facebook.com/share/v/15nrv2YPTY/

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಿ, ಅನಾಮಧೇಯ ವ್ಯಕ್ತಿಯೊಬ್ಬ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯಗಳು ಕೋರಿರುವಂತಹ ಪತ್ರದೊಂದಿಗೆ ಕಹಿಭರಿತ ಸಿಹಿತಿಂಡಿಯನ್ನು ಕೆಲವು ಮುಖಂಡರಿಗೆ ಹಾಗೂ ಗಣ್ಯರಿಗೆ ಕಳುಹಿಸಿ, ಡಾ.ಧನಂಜಯ ಸರ್ಜಿ ಅವರ ಹೆಸರಿಗೆ ಮಸಿ ಬಳಿಯುವ ಕೃತ್ಯ ನಡೆಸಿರುವುದು ಖಂಡನೀಯ. ಈ ಬಗ್ಗೆ ದೂರು ದಾಖಲು ಮಾಡಲಾಗಿದ್ದು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ಅನಾಮಧೇಯ ವ್ಯಕ್ತಿಯ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಆರೋಪಿಗೆ ತಕ್ಕ ಶಿಕ್ಷೆಯಾಗಲಿ
ಕಹಿ ಭರಿತ ಸಿಹಿ ಬಾಕ್ಸ್ ಕೊಟ್ಟ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದು, ಒಂದು ದಿನದೊಳಗೆ ಆರೋಪಿಯನ್ನು ಬಂಧಿಸಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಭರವಸೆ ಕೊಟ್ಟಿದ್ದಾರೆ. ಒಂದು ವೇಳೆ ಕಹಿಭರಿತ ಸಿಹಿ ಮಕ್ಕಳೇನಾದರೂ ಸೇವಿಸಿದ್ದರೆ ದೊಡ್ಡ ಅನಾಹುತವೇ ಆಗುತ್ತಿತ್ತು. ಇಂತಹ ಪ್ರಕರಣಗಳು ಮತ್ತೆ ಮರುಕಳಿಸಬಾರದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. 
– ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಶಾಸಕ

ಹಬ್ಬ-ಹರಿ ದಿನಗಳಲ್ಲಿ ಬೇವು-ಬೆಲ್ಲ, ಎಳ್ಳು-ಬೆಲ್ಲವನ್ನು ಹಂಚುವ ಮೂಲಕ ಸಾಮರಸ್ಯ ಬಿತ್ತುವ ಕೆಲಸವನ್ನು ಶಾಸಕ ಡಾ.ಧನಂಜಯ ಸರ್ಜಿ ಅವರು ಮಾಡಿಕೊಂಡು ಬಂದಿದ್ದಾರೆ, ಆದರೆ, ಈ ಕಹಿ ಘಟನೆ ಅವರ ಮನಸ್ಸಿಗೆ ಆಘಾತವನ್ನುಂಟು ಮಾಡಿದೆ. ಹಾಗಾಗಿ  ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಿಡಿಗೇಡಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಆತನನ್ನು ಬಂಧಿಸಬೇಕು.
– ಎಸ್.ಎನ್. ಚನ್ನಬಸಪ್ಪ, ಶಿವಮೊಗ್ಗ ನಗರ ಶಾಸಕ

Leave a Comment