ಹೊಸನಗರ ; ಮಲೆನಾಡು ಪ್ರೌಢ ಶಾಲೆಯ ಶಿಕ್ಷಕ ಚಂದ್ರುರಿಗೆ 2025-25ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರೆಂದು ಗುರುತಿಸಿ ಶಿವಮೊಗ್ಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.
ಇವರು ಹೊಸನಗರದ ಮಲೆನಾಡು ಪ್ರೌಢ ಶಾಲೆಯಲ್ಲಿ 2015 ರಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಶಾಲಾಭಿವೃದ್ಧಿ ಕಾರ್ಯಗಳಿಗೆ 10 ಲಕ್ಷಕ್ಕೂ ಅಧಿಕ ಹಣವನ್ನು ಕಲಿಕೆಗೆ ಸಂಬಂಧಿಸಿದಂತೆ ತಂದು ಮಕ್ಕಳ ಮತ್ತು ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ್ದಲ್ಲದೇ ಉತ್ತಮವಾಗಿ ಭೋದಿಸುತ್ತಿದ್ದು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವೈಯಕ್ತಿಕವಾಗಿ ಸಹಾಯವನ್ನು ಮಾಡಿರುವುದನ್ನು ಮನಗಂಡ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಶಿಕ್ಷಕರ ದಿನದಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದೆ.

ಅಭಿನಂದನೆ :
ಇವರ ಈ ಸಾಧನೆಗೆ ಮಲೆನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಗಳ ವರ್ಗ ವರ್ತಕರಾದ ಗುರುರಾಜ್ ಇನ್ನೂ ಮುಂತಾದವರು ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.