ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ‘ಮನೆ-ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆ

Written by Mahesh Hindlemane

Published on:

ರಿಪ್ಪನ್‌ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಭಾಗವಾಗಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವತಿಯಿಂದ ಕೋಡೂರು ಮತ್ತು ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿಂದು ಚಾಲನೆ ನೀಡಲಾಯಿತು.

WhatsApp Group Join Now
Telegram Group Join Now
Instagram Group Join Now

ಬಾಳೂರು ಹಕ್ಕಿಪಿಕ್ಕಿ ಬಡಾವಣೆಯಲ್ಲಿ ಹಕ್ಕಿಪಿಕ್ಕಿ ಜನಾಂಗವದರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಿದರು.

ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿವರ್ಗ ಹಾಲುಗುಡ್ಡೆಯ ಹಕ್ಕಿಪಿಕ್ಕಿ ಜನಾಂಗದವರಿಗೆ ಮತ್ತು ಕೋಡೂರಿಗೆ ಗ್ರಾಪಂಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿ, ಈ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ವಿವರಿಸುವ ಮೂಲಕ ಸಮಸ್ಯೆಗಳನ್ನು ಆಲಿಸಿ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದರು.

ಜನರು ನೇರವಾಗಿ ನಮ್ಮ ಪೊಲೀಸ್ ಸಿಬ್ಬಂದಿಗಳೊಂದಿಗೆ ಯಾವುದೇ ಹಿಂಜರಿಕೆ ಇಲ್ಲದಂತೆ ತಮ್ಮ ಗ್ರಾಮದ ಹಾಗೂ ತಮ್ಮಲ್ಲಿನ ಸಮಸ್ಯೆಯನ್ನು ಹೇಳಿಕೊಂಡು ಪರಿಹರಿಸಿಕೊಳ್ಳುವುದು ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮದ ಉದ್ದೇಶವೆಂದು ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ತಿಳಿಸಿದರು.

ಈಗಾಗಲೇ ಈ ಮಹತ್ವಾಕಾಂಕ್ಷಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಲು ಕರೆ ನೀಡಿದರು.

ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ಗಿರೀಶ್, ಸಂತೋಷ, ವಾಹನ ಚಾಲಕ ಅಭಿಲಾಶ್ ಇನ್ನಿತರರು ಪಾಲ್ಗೊಂಡಿದರು.

Leave a Comment