ಹೊಸನಗರ

ಮಾಜಿ ಶಾಸಕ ಡಾ. ಜಿ.ಡಿ. ನಾರಾಯಣಪ್ಪಗೆ ಹುಟ್ಟೂರಿನಲ್ಲಿ ಅದ್ಧೂರಿ ಸನ್ಮಾನ: ಯಾವಾಗ ಗೊತ್ತಾ?

ವೈದ್ಯರತ್ನ ಹಾಗೂ ಮಾಜಿ ಶಾಸಕ ಡಾ. ಜಿ.ಡಿ. ನಾರಾಯಣಪ್ಪ ಅವರ ಜೀವಮಾನದ ಸಾಧನೆ ಮತ್ತು ಜನಪರ ಸೇವೆಯನ್ನು ಗೌರವಿಸಿ, ಅವರ ಹುಟ್ಟೂರಿನಲ್ಲಿ ಅದ್ಧೂರಿ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.

Dr. G.D. Narayanappa

ರಿಪ್ಪನ್‌ಪೇಟೆ: ವೈದ್ಯರತ್ನ ಹಾಗೂ ಮಾಜಿ ಶಾಸಕ ಡಾ. ಜಿ.ಡಿ. ನಾರಾಯಣಪ್ಪ ಅವರ ಜೀವಮಾನದ ಸಾಧನೆ ಮತ್ತು ಜನಪರ ಸೇವೆಯನ್ನು ಗೌರವಿಸಿ, ಅವರ ಹುಟ್ಟೂರಿನಲ್ಲಿ ಅದ್ಧೂರಿ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಆಯೋಜಿಸಲು ಅಭಿಮಾನಿಗಳು ಮತ್ತು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನವೆಂಬರ್ 29ರ ಭಾನುವಾರದಂದು ಅಮೃತ (ಗರ್ತಿಕೆರೆ) ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (KPS) ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಅವರ ಸಾಧನೆಗಳನ್ನು ಬಿಂಬಿಸುವ ವಿಶೇಷ ಅಭಿನಂದನಾ ಗ್ರಂಥವನ್ನೂ ಲೋಕಾರ್ಪಣೆಗೊಳಿಸಲಾಗುವುದು.

ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತಿದ್ದು, ನಾರಾಯಣಪ್ಪ ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ಬಂಧು-ಮಿತ್ರರು ಸಕಾಲಿಕ ಸಲಹೆ ಮತ್ತು ಸಹಕಾರ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬೇಕಾಗಿ ಅಭಿನಂದನಾ ಸಮಿತಿ ಕೋರಿದೆ.

ಎಲ್ಲಾ ಅಭಿಮಾನಿಗಳು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಂಭ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಭಿನಂದನಾ ಸಮಿತಿ ಸದಸ್ಯ ಹಾಗೂ ಅಮೃತ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಹಾಲಪ್ಪ ಸಂಕೂರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]