ರಿಪ್ಪನ್ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇಂದು ಸಂಜೆ ನಡೆದಿದೆ.

ನಗರ ಮಾರಿಕಾಂಬಾ ಜಾತ್ರೆಗೆ ತೆರಳಿದ್ದ ಇವರು ಶಿವಮೊಗ್ಗಕ್ಕೆ ವಾಪಾಸ್ ಆಗುವ ವೇಳೆ ಈ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ 11 ಕೆ.ವಿ. ವಿದ್ಯುತ್ ಕಂಬ ತುಂಡಾಗಿದ್ದು ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಇಬ್ಬರು ಪುರುಷರು, ನಾಲ್ವರು ಮಹಿಳೆಯರು ಸೇರಿದಂತೆ ಆರು ಜನ ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಎಲ್ಲರೂ ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇವರೆಲ್ಲರೂ ಶಿವಮೊಗ್ಗ ಮೂಲದವರು ಎಂದು ತಿಳಿದುಬಂದಿದೆ.

ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





