Accident

ಕೋಡೂರು ; ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇಂದು ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಗರ ಮಾರಿಕಾಂಬಾ ಜಾತ್ರೆಗೆ ತೆರಳಿದ್ದ ಇವರು ಶಿವಮೊಗ್ಗಕ್ಕೆ ವಾಪಾಸ್ ಆಗುವ ವೇಳೆ ಈ ಘಟನೆ ನಡೆದಿದ್ದು ಡಿಕ್ಕಿಯ ರಭಸಕ್ಕೆ 11 ಕೆ.ವಿ. ವಿದ್ಯುತ್ ಕಂಬ ತುಂಡಾಗಿದ್ದು ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಇಬ್ಬರು ಪುರುಷರು, ನಾಲ್ವರು ಮಹಿಳೆಯರು ಸೇರಿದಂತೆ ಆರು ಜನ ಪ್ರಯಾಣಿಸುತ್ತಿದ್ದು  ಅದೃಷ್ಟವಶಾತ್ ಎಲ್ಲರೂ ಸಣ್ಣ-ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇವರೆಲ್ಲರೂ ಶಿವಮೊಗ್ಗ ಮೂಲದವರು ಎಂದು ತಿಳಿದುಬಂದಿದೆ.

ಅತಿ ವೇಗವೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>