Accident

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಇಬ್ಬರು ಮಕ್ಕಳು ಸೇರಿ 06 ಮಂದಿಗೆ ಗಾಯ !

SHIVAMOGGA ; ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ಸೊಂದು ಪಲ್ಪಿಯಾಗಿ ಇಬ್ಬರು ಮಕ್ಕಳು ಸೇರಿ 06 ಮಂಗಿ ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬ ನಗರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://www.facebook.com/share/v/R2rG7nKqM4ZWXFVc/

ನಗರದ ಬೊಮ್ಮನಕಟ್ಟೆ ರೈಲ್ವೇ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಬಸ್ ಚಲಾಯಿಸಿ, ಹಂಪ್ ಹಾರಿಸಿದ ಪರಿಣಾಮ ಸ್ಟೇರಿಂಗ್ ಕಟ್ ಆಗಿ, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಬ್ಬಿಣದ ಫೆನ್ಸಿಂಗ್ ದಾಟಿ, ಚರಂಡಿಗೆ ಬಸ್ ಬಿದ್ದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ಹೊರಟಿದ್ದ ಸಿಟಿ ಬಸ್ ನಲ್ಲಿ ಸುಮಾರು 20 ಜನ ಪ್ರಯಾಣಿಕರಿದ್ದರು. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಎಲ್ಲಾ 6 ಜನ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]