CHIKKAMAGALURU ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು 250 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಶುಕ್ರವಾರ ನಡೆದಿದೆ.
ಘಟನೆಯಿಂದ ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು ಅವರನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು ತೆಲಂಗಾಣ ಮೂಲದ್ದು ಎನ್ನಲಾಗಿದ್ದು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ 250 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರವಾಸಿಗರು ಪಾರಾಗಿದ್ದಾರೆ.
ಈ ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.