RIPPONPETE ; ಹೊಸನಗರ – ರಿಪ್ಪನ್‌ಪೇಟೆ ಮಾರ್ಗದ ಹಿರೇಜೇನಿ ಎಂಬಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಖಾಸಗಿ ಬಸ್ ಎದುರುಗಡೆಯಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಡೆದಿದೆ.

ಬಸ್ ಉರುಳಿದ ಸಮೀಪವೇ ವಿದ್ಯುತ್ ಕಂಬವಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ-ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.