Featured

E Khata : ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತೆ ಕಡ್ಡಾಯ !

E Khata:ಬೆಂಗಳೂರು ನಗರದಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವು ಪ್ರಮುಖ ಬದಲಾವಣೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈಗಾಗಲೇ ಆಸ್ತಿ ಖರೀದಿಸುವ ಅಥವಾ ಮಾರಾಟ ಮಾಡುವಾಗ ಇ-ಖಾತೆ ಅನ್ನು ಕಡ್ಡಾಯವಾಗಿ ಬಳಸುವುದು ಅಗತ್ಯವಾಗಿದೆ. ಇತ್ತೀಚೆಗೆ, ಬಿಬಿಎಂಪಿ ಪ್ರತ್ಯೇಕವಾಗಿ ವಿವಿಧ ಆಸ್ತಿಗಳಿಗೆ ಇ-ಖಾತೆ ಅನ್ನು ಕಡ್ಡಾಯ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಮಹತ್ವದ ಪ್ರಕಟಣೆಯನ್ನು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ವ್ಯವಸ್ಥೆ ಈಗಾಗಲೇ ಲಭ್ಯವಾಗಿದ್ದು, ಪಾಲಿಕೆಯ ಕಂದಾಯ ವಿಭಾಗವು ಇ-ಆಸ್ತಿ ತಂತ್ರಾಂಶವನ್ನು ಕಾರ್ಯಗತಗೊಳಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಈ ರೀತಿಯ ಸ್ವತ್ತುಗಳ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ಪಡೆಯಬಹುದಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಪಾಲಿಕೆಯ ನಗರ ಯೋಜನಾ ವಿಭಾಗವು ನೀಡುವ ನಕ್ಷೆ ಮಂಜೂರಾತಿಯನ್ನು ಇಒಡಿಬಿ-ಒಬಿಪಿಎಸ್ ಆನ್‌ಲೈನ್ ತಂತ್ರಾಂಶದ ಮೂಲಕ ಮತ್ತು ಪಾಲಿಕೆಯ ಕಂದಾಯ ವಿಭಾಗದ ಇ-ಖಾತಾ ನೀಡುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿವೇಶನ ಅಥವಾ ಸ್ವತ್ತಿನ ಕಂದಾಯ ದಾಖಲೆಗಳನ್ನು ಪರಿಶೀಲಿಸಲು ಬಳಸುವ ತಂತ್ರಾಂಶವು 01-07-2025ರಿಂದ ಸ್ವತ್ತಿನ ಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ಆನ್‌ಲೈನ್ ತಂತ್ರಾಂಶದಲ್ಲಿ ನಮೂದಿಸಲು ಹಾಗೂ ಇ-ಖಾತಾ ಸಲ್ಲಿಸಲು ಅಗತ್ಯವಿರುತ್ತದೆ. ಇದರಿಂದ, ಪಾಲಿಕೆಯ ಕಂದಾಯ ವಿಭಾಗಕ್ಕೆ ಸ್ವತ್ತಿನ ದಾಖಲೆಗಳನ್ನು ಪರಿಶೀಲಿಸಲು ಸಲ್ಲಿಸುವ ಪ್ರಕ್ರಿಯೆ ಹೊರತಾಗುವುದರಿಂದ, ಪಾಲಿಕೆಯು ನೀಡುವ ಸೇವೆಗಳನ್ನು ಸುಲಭಗೊಳಿಸಲು ಮತ್ತು ಸಮಯದಲ್ಲಿ ನಕ್ಷೆ ಮಂಜೂರಾತಿ ನೀಡಲು ಸಹಾಯವಾಗಲಿದೆ.

Read More

ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650