ಹೊಸನಗರ

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮೊಬೈಲ್‌ನಲ್ಲೇ ಇ-ಕೆವೈಸಿ ಸೌಲಭ್ಯ

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ‘ಅನ್ನಸೇವೆ’ ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ

ಮೊಬೈಲ್‌ನಲ್ಲೇ ಇ-ಕೆವೈಸಿ ಸೌಲಭ್ಯ E-kyc

ಹೊಸನಗರ : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ‘ಅನ್ನಸೇವೆ’ ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು (ಅ. 5ರಂದು) ಬಿಡುಗಡೆ ಮಾಡಿದೆ ಎಂದು ಹೊಸನಗರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಬಿ. ಚಿದಂಬರ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಜನರ ಸಮಯ ಮತ್ತು ಶ್ರಮವನ್ನು ಉಳಿಸುವ ಉದ್ದೇಶದಿಂದ ಈ ಡಿಜಿಟಲ್ ಸೇವೆ ಜಾರಿಗೆ ತರಲಾಗಿದೆ. ಇನ್ಮುಂದೆ ಇ-ಕೆವೈಸಿಗಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ಕಾಯುವ ಅಗತ್ಯವಿಲ್ಲ. ಬದಲಾಗಿ, ಮನೆಯಲ್ಲೇ ಕುಳಿತು ಸ್ಮಾರ್ಟ್‌ಫೋನ್ ಮೂಲಕವೇ ಈ ಪ್ರಕ್ರಿಯೆಯನ್ನು ಸುಲಭವಾಗಿ ಮುಗಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯ:

ರೇಷನ್ ಕಾರ್ಡ್ ಸಕ್ರಿಯವಾಗಿರಲು ಮತ್ತು ಉಚಿತ ಅಕ್ಕಿ ಸೌಲಭ್ಯ ಮುಂದುವರಿಯಲು ಇ-ಕೆವೈಸಿ ಕಡ್ಡಾಯ. ಕಾರ್ಡ್‌ನಲ್ಲಿ ಹೆಸರಿರುವ ಮಕ್ಕಳು, ಹಿರಿಯರು ಸೇರಿದಂತೆ ಪ್ರತಿಯೊಬ್ಬರೂ ಫೇಸ್ ಅಥೆಂಟಿಕೇಶನ್ ಮೂಲಕ ದೃಢೀಕರಣ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಅಕ್ಟೋಬರ್ 20 ಕಡೆ ದಿನ:

ಫಲಾನುಭವಿಗಳು ಸ್ವತಃ ‘ಅನ್ನಸೇವೆ’ ಆ್ಯಪ್ ಬಳಸಿ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಆಧಾರ್ ಕಾರ್ಡ್ ಹಾಗೂ ಮೊಬೈಲ್ ತೆಗೆದುಕೊಂಡು ಹೋಗಿ ಅಕ್ಟೋಬರ್ 20ರ ಒಳಗಾಗಿ ಇ-ಕೆವೈಸಿ ಪೂರ್ಣಗೊಳಿಸಬೇಕು ಎಂದರು.

ಹಣ ಕೇಳಿದರೆ ಲೈಸೆನ್ಸ್ ರದ್ದು:

ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದು ಸಂಪೂರ್ಣ ಉಚಿತವಾಗಿದೆ. ಒಂದು ವೇಳೆ ಯಾರಾದರೂ ಹಣಕ್ಕೆ ಬೇಡಿಕೆಯಿಟ್ಟರೆ, ತಹಶೀಲ್ದಾರ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಗೆ ದೂರು ನೀಡಬಹುದು. ಅಂತಹ ಅಂಗಡಿಗಳ ಪರವಾನಗಿಯನ್ನು ನಿರ್ದಾಕ್ಷಿಣ್ಯವಾಗಿ ರದ್ದು ಮಾಡಲಾಗುವುದು ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!