Ripponpete

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದಿಂದ ಈದ್-ಉಲ್-ಫಿತ್ರ್ ಆಚರಣೆ

ರಿಪ್ಪನ್‌ಪೇಟೆ ; ಇಲ್ಲಿನ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿಯವರು ಈದ್-ಉಲ್-ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

WhatsApp Group Join Now
Telegram Group Join Now
Instagram Group Join Now

ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ ಈದ್-ಉಲ್-ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿನ ಖಬರ್ ಝಿಯಾರತ್ ನಡೆಯಿತು. ಆ ನಂತರ ಮುಸ್ಲಿಂ ಭಾಂದವರು ಪರಸ್ಪರ ಹಬ್ಬದ ಶುಭಾಶಯವನ್ನು ಅಪ್ಪಿಕೊಳ್ಳುವ ಮೂಲಕ ವಿನಿಮಯ ಮಾಡಿಕೊಂಡರು.

ಗಾಳಿಬೈಲು ; ಇಲ್ಲಿನ ಗಾಳಿಬೈಲು ಮೆಕ್ಕಾ ಮಸೀದಿಯವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸುವ ಮೂಲಕ ಖಬರ್ ಸ್ಥಾನಕ್ಕೆ ಮೆರವಣಿಗೆ ಮೂಲಕ ತೆರಳಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ ಈದ್-ಉಲ್-ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಗಾಳಿಬೈಲು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆ ಹೊರಟು ಗಾಳಿಬೈಲು ಖಬರ್ ಝಿಯಾರತ್ ನಡೆಯಿತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!