ಮಂಗನ ಕಾಯಿಲೆಗೆ ವೃದ್ಧ ಬಲಿ !

Written by Mahesha Hindlemane

Published on:

ಸಾಗರ ; ಮಂಗನ ಕಾಯಿಲೆಗೆ ವೃದ್ಧ ಬಲಿಯಾದ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನ್ಮನೆ ಗ್ರಾಮದ ನಿವಾಸಿ ಮಂಜಪ್ಪ (65) ಮೃತ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಆರಂಭದಲ್ಲಿ ಇವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸಿದಾಗ ಅವರಿಗೆ ಕೆಎಫ್‌ಡಿ (Kyasanur Forest Disease) ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಂತೆ ಮಂಜಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Comment