ಹೊಸನಗರ

ಹಗಲಿರುಳು ಶ್ರಮಿಸಿದ ಸಿಬ್ಬಂದಿಯೇ ನಮ್ಮ ಯಶಸ್ಸಿನ ಶಕ್ತಿ: ವರ್ಗಾವಣೆಗೊಂಡ ಬಿ.ಜಿ. ಸತೀಶ್ ಭಾವುಕ ನುಡಿ

ಕಠಿಣ ಸಂದರ್ಭಗಳಲ್ಲಿ ಮತ್ತು ಸವಾಲಿನ ಕೆಲಸಗಳನ್ನು ನಿಭಾಯಿಸುವಾಗ ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ನೀಡುವ ಬೆಂಬಲವನ್ನು ಯಾವತ್ತೂ ಮರೆಯಬಾರದು ಎಂದು ಚುನಾವಣಾ ಶಿರಸ್ತೇದಾರ್ ಬಿ.ಜಿ. ಸತೀಶ್ ಅಭಿಪ್ರಾಯಪಟ್ಟರು.

B.G Sathish

ಹೊಸನಗರ: ಕಠಿಣ ಸಂದರ್ಭಗಳಲ್ಲಿ ಮತ್ತು ಸವಾಲಿನ ಕೆಲಸಗಳನ್ನು ನಿಭಾಯಿಸುವಾಗ ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ನೀಡುವ ಬೆಂಬಲವನ್ನು ಯಾವತ್ತೂ ಮರೆಯಬಾರದು ಎಂದು ಚುನಾವಣಾ ಶಿರಸ್ತೇದಾರ್ ಬಿ.ಜಿ. ಸತೀಶ್ ಅಭಿಪ್ರಾಯಪಟ್ಟರು.

WhatsApp Group Join Now
Telegram Group Join Now
Instagram Group Join Now

ಹೊಸನಗರ ತಾಲೂಕು ಕಂದಾಯ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಚುನಾವಣಾ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಇವರು, ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಆತ್ಮೀಯ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

“ಕಳೆದ ನಾಲ್ಕು ತಿಂಗಳಿನಿಂದ ಮತದಾರರ ಪಟ್ಟಿ ಪರಿಷ್ಕರಣೆ (SIR) ಸೇರಿದಂತೆ ಚುನಾವಣಾ ಸಂಬಂಧಿತ ಕಾರ್ಯಗಳ ಒತ್ತಡ ಹೆಚ್ಚಾಗಿತ್ತು. ಹೊಸನಗರ ತಾಲೂಕಿನಲ್ಲಿ ಈ ಪ್ರಕ್ರಿಯೆ ಶೇ.100ರಷ್ಟು ಯಶಸ್ವಿಯಾಗಲು ನಮ್ಮ ಸಿಬ್ಬಂದಿ ಹಗಲಿರುಳು ಶ್ರಮಿಸಿದ್ದಾರೆ. ಜೊತೆಗೆ ಸಾರ್ವಜನಿಕರೂ ಉತ್ತಮ ಸಹಕಾರ ನೀಡಿದ್ದಾರೆ. ಇವರೆಲ್ಲರ ಶ್ರಮವನ್ನು ಸ್ಮರಿಸುವುದು ನನ್ನ ಕರ್ತವ್ಯ” ಎಂದು ಅವರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬಿ.ಜಿ. ಸತೀಶ್ ಅವರನ್ನು ಗೌರವಿಸಿ ಮಾತನಾಡಿದ ಗ್ರೇಡ್-2 ತಹಶೀಲ್ದಾರ್ ಸುಧೀಂದ್ರಕುಮಾರ್, “ಸತೀಶ್ ಅವರು ತಮ್ಮ ಅಧಿಕಾರಾವಧಿಯಲ್ಲಿ ತಾಲೂಕಿಗೆ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ವಿಶೇಷವಾಗಿ ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಸಿಬ್ಬಂದಿಯನ್ನು ಜೊತೆಗೂಡಿಸಿಕೊಂಡು ಹಗಲು-ರಾತ್ರಿ ಕೆಲಸ ಮಾಡಿ ತಾಲೂಕಿಗೆ ಹೆಸರು ತಂದಿದ್ದಾರೆ. ಇಲ್ಲಿ ಸೇವೆ ಸಲ್ಲಿಸಿದಷ್ಟು ದಿನ ಒಂದೇ ಒಂದು ಕಪ್ಪುಚುಕ್ಕೆ ಬಾರದಂತೆ, ಯಾರಿಂದಲೂ ದೂರುಗಳಿಗೆ ಆಸ್ಪದ ನೀಡದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಮುಂದಿನ ದಿನಗಳಲ್ಲೂ ಅವರು ಇದೇ ರೀತಿ ಉತ್ತಮ ಹೆಸರು ಗಳಿಸಲಿ” ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಸತೀಶ್, ಚುನಾವಣಾ ವಿಭಾಗದ ಮಹಮದ್ ರೈಸ್, ಬಾಷಾ ಸೇರಿದಂತೆ ಇಲಾಖೆಯ ಇತರ ನೌಕರರು ಪಾಲ್ಗೊಂಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]