ರಿಪ್ಪನ್‌ಪೇಟೆ ; ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಡಿಕೆ ತೋಟದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ ಸುಮಾರು 300ಕ್ಕೂ ಅಧಿಕ ಅಡಿಕೆ ಬಾಳೆ, ತೆಂಗಿನ ಗಿಡಗಳು ಸುಟ್ಟು ಭಸ್ಮಗೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಳಲೆ ಗ್ರಾಮದ ಸ.ನಂ 60 ರಲ್ಲಿ ಇರುವ ಹುಚ್ಚನಾಯ್ಕ್ ಎಂಬುವರಿಗೆ ಸೇರಿದ 38 ಗುಂಟೆ ಜಮೀನಿನಲ್ಲಿನ ಅಡಿಕೆ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ಸಂಪರ್ಕದ ಲೈನ್ ತಾಗಿ ಶಾರ್ಟ್‌ಸರ್ಕ್ಯೂಟ್ ಉಂಟಾಗಿ ತೋಟದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ಬೆಂಕಿ ಇಡೀ ತೋಟವನ್ನು ವ್ಯಾಪಿಸಿದ ಪರಿಣಾಮದಿಂದಾಗಿ ಅಡಿಕೆ, ತೆಂಗು, ಬಾಳೆ ಗಿಡಗಳು ಸುಟ್ಟು ಕರಕಲಾಗಿವೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಹ ಹೆಚ್ಚಿನ ಹಾನಿಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

