Ripponpete

ಪರಿಸರ ಸಂರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯ : DRFO ಹಾಲೇಶ್

ರಿಪ್ಪನ್‌ಪೇಟೆ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಜೊತೆಗೆ ಜಲ ಮೂಲಗಳಾದ ಕೆರೆ-ಕಟ್ಟೆ, ನದಿಗಳನ್ನು ರಕ್ಷಣೆ ಮಾಡಿ ಉತ್ತಮ ಪರಿಸರ ನಿರ್ಮಾಣವಾಗಲು ಸಹಕಾರ ನೀಡಬೇಕೆಂದು ಕೋಡೂರು ಉಪವಲಯ ಅರಣ್ಯಾಧಿಕಾರಿ ಹಾಲೇಶ ಅನೇವರಿ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಹಿರೇಜೇನಿ ಗ್ರಾಮದ ಕಾರೇಮಟ್ಟಿಯ ಅರವಿಂದಭಟ್ಟರ ಮನೆಯ ಬಳಿ ಪರಿಸರ ದಿನಾಚರಣೆ ಹಾಗೂ ಸಂರಕ್ಷಣೆ ಕುರಿತು ಅರಣ್ಯ ಇಲಾಖೆಯೊಂದಿಗೆ ಮತ್ತು ಶಿವಮೊಗ್ಗ ಓಪನ್ ಮೈಂಡ್ ಶಾಲಾ ಮಕ್ಕಳ ಹಾಗೂ ಸಿಬ್ಬಂದಿ ವರ್ಗದ ಸಹಕಾರದಿಂದ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಗಿಡ ನೆಡುವ ಮೂಲಕ ಮಾತನಾಡಿದ ಅವರು, ಪರಿಸರ ಮಹತ್ವದ ಬಗ್ಗೆ ಮಕ್ಕಳಿಗೆ ಚಿಕ್ಕನಿಂದಲ್ಲೆ ಜಾಗೃತಿ ಮೂಡಿಸಬೇಕು. ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಬಿಟ್ಟು ಪರಿಸರ ಸ್ನೇಹಿ ಬಟ್ಟೆ ಚೀಲಗಳನ್ನು ಬಳಕೆ ಮಾಡಬೇಕು. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಬಾಲಚಂದ್ರನಾಯ್ಡ್, ಗಸ್ತು ಅರಣ್ಯಾಧಿಕಾರಿ ಕೆ.ಎನ್.ಹರೀಶ್, ಮಲ್ಲಪ್ಪ, ಚೂಡಾಮಣಿ, ಅರಣ್ಯ ವೀಕ್ಷಕರು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!