ಹೊಸನಗರ ; ಅಂಧತ್ವ ಎಂಬುವುದು ಇಡೀ ಪ್ರಪಂಚದ ಪಿಡುಗು ಅದನ್ನು ನಿರ್ಮೂಲನೆ ಮಾಡಬೇಕಾದರೆ ಆಶಾ ಕಾರ್ಯಕರ್ತೆಯರು ಹಾಗೂ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತ ವರ್ಗದವರ ಕರ್ತವ್ಯವಾಗಿರುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಹೇಮಂತ್ ಎನ್ ಹೇಳಿದರು.
ತಾಲ್ಲೂಕು ಪಂಚಾಯತಿ ಆವರಣದಲ್ಲಿ ಶಿವಮೊಗ್ಗ ಜಿಲ್ಲೆ ಅಂಧತ್ವದಿಂದ ಮುಕ್ತಿ ಮಾಡಲು ಅಂಧತ್ವ ಮುಕ್ತ ಶಿವಮೊಗ್ಗ ಮಾಡುವ ಉದ್ದೇಶದಿಂದ ಸಮಾಲೋಚನಾ ಸಭೆಯನ್ನು ಹೊಸನಗರ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಸಭೆಯಲ್ಲಿ ಮಾತನಾಡಿದರು.
ಹೊಸನಗರ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿ ಮನೆ-ಮನೆಗೂ ಭೇಟಿ ನೀಡಿ ಅಲ್ಲಿರುವ ಮನೆಯ ಎಲ್ಲ ಸದಸ್ಯರನ್ನು ಪ್ರಾಥಮಿಕ ಕಣ್ಣಿನ ತಪಾಸಣೆ ನಡೆಸಿ ಕಣ್ಣಿನ ಆರೋಗ್ಯ ಕುರಿತು ಮಾಹಿತಿಯನ್ನು ಆರೋಗ್ಯ ಇಲಾಖೆಗೆ ತಿಳಿಸಬೇಕು ನಂತರ ಇಲಾಖೆಯ ಹಿರಿಯ ವೈದ್ಯಾಧಿಕಾರಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಣ್ಣಿನ ಸಮಸ್ಯೆ ಇರುವ ರೋಗಿಗಳನ್ನು ತಪಾಸಣೆ ಮಾಡಿ ಅವರಿಗೆ ಔಷಧಿ ಅಥವಾ ಆಪರೇಷನ್ ಅಥವಾ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಸರ್ಕಾರದಿಂದಲೇ ಉಚಿತವಾಗಿ ನೀಡುತ್ತೇವೆ ಎಂಬ ಸಲಹೆಯನ್ನು ನೀಡಬೇಕು. ಅಂಧತ್ವದ ಸಮಸ್ಯೆ ಇರುವ ಸದಸ್ಯರನ್ನು ಗುರುತಿಸಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಶಿಬಿರವನ್ನು ಗ್ರಾಮ ಪಂಚಾಯತಿ ಏರ್ಪಡಿಸಬೇಕು. ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಮೇಲಿನ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದಾಗ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಶಿವಮೊಗ್ಗದ ಕಛೇರಿಗೆ ತಿಳಿಸಿದಾಗ ನಾವು ಸರ್ಕಾರಕ್ಕೆ ತಿಳಿಸಿ ಅವರಿಗೆ ಬೇಕಾಗುವಂಥಹ ಸಲಹೆ ಸೂಚನೆಗಳನ್ನು ನೀಡುತ್ತೇವೆ ಎಂದರು.
ಈ ಯೋಜನೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಮೇಲಿರುವ ಮನೆಯ ಎಲ್ಲ ಸದಸ್ಯರಿಗೂ ಅನ್ವಯವಾಗುತ್ತದೆ ಒಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲರೂ ಕಣ್ಣಿನ ಯಾವುದೇ ಸಮಸ್ಯೆಗೆ ಒಳಗಾಗದೇ ಸಂತೋಷದಿಂದ ಜೀವನ ಸಾಗಿಸುವ ಉದ್ದೇಶದಿಂದ ಈ ಅಭಿಯಾನ ಆರಂಭಿಸಲಾಗಿದೆ ಈ ಯೋಜನೆ ಒಂದು ವರ್ಷಗಳ ಕಾಲ ಸದಾ ನಿಮ್ಮ ಸೇವೆಯಲ್ಲಿರುತ್ತದೆ. ಇದರ ಸಂಪೂರ್ಣ ಜವಾಬ್ದಾರಿಯನ್ನು ಸಿಇಒ ವಹಿಸಲಿದ್ದಾರೆ. ಇದಕ್ಕೆ ಗ್ರಾಮ ಪಂಚಾಯಿತಿ ಎಲ್ಲಾ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಆಶಾ ಕಾರ್ಯಕರ್ತೆಯರು ಒಟ್ಟಾಗಿ ಸಹಕಾರ ನೀಡುವುದರೊಂದಿಗೆ ಜಿಲ್ಲೆಯಲ್ಲಿ ಅಂಧತ್ವ ನಿವಾರಣೆಯಾಗಬೇಕಾದರೆ ತಾಲ್ಲೂಕಿನ ಎಲ್ಲ ಅಧಿಕಾರಗಳ ಸಹಕಾರ ಅಗತ್ಯವಾಗಿದ್ದು ತಾಲ್ಲೂಕಿನಲ್ಲಿ ಅಂಧತ್ವ ಹೊಗಲಾಡಿಸುವಲ್ಲಿ ಶ್ರಮಿಸಿಬೇಕೆಂದು ಕೇಳಿಕೊಂಡರು.
ಈ ಕಾರ್ಯಕ್ರಮದಲ್ಲಿ ಡಾ. ಕಿರಣ್ ಕಣ್ಣಿನ ಆರೋಗ್ಯದ ಬಗ್ಗೆ ಮಾತನಾಡಿದರು.
ಹೊಸನಗರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ವ್ಯವಸ್ಥಾಪಕರಾದ ಶಿವಕುಮಾರ್, ರಾಜೇಂದ್ರಕುಮಾರ್, ಪವನ್‌ಕುಮಾರ್ ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿಯ ಎಲ್ಲ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರುಗಳು ಉಪಸ್ಥಿತರಿದ್ದರು.