ಬೆಂಗಳೂರು ; ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕಾಲಮಿತಿಯಲ್ಲಿ ಪೂರ್ಣವಾಗಿಲ್ಲ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆ ಕಾರ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆ ಅವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆಯನ್ನು ಆಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಶಿಕ್ಷಕರನ್ನು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಬೋಧನೆಗೆ ಬಳಕೆಯಿಂದ ಯಾವುದಕ್ಕೂ ನ್ಯಾಯ ನೀಡಲು ಆಗಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ.

ಈ ಸರ್ವೆಗೆ ಹಿಂದೇಟು ಹಾಕುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುತ್ತೇವೆ. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸದ್ಯದ ಮಟ್ಟಿಗೆ ಪಿಯುಸಿ ಉಪನ್ಯಾಸಕರು ಸರ್ವೇಯಲ್ಲಿ ಭಾಗಿಯಾಗುವಂತಿಲ್ಲ. ಈಗ ನೀಡಿರುವ ಸಮಯದೊಳಗೆ ಸಮೀಕ್ಷೆಯನ್ನು ಮುಗಿಸಿಕೊಡಲು ಸ್ಪಷ್ಟಪಡಿಸಿದ್ದೇವೆ ಎಂದು ಸಿಎಂ ಹೇಳಿದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.