ಜುಲೈ 29 ರಂದು ನಾಗರಹಳ್ಳಿಯಲ್ಲಿ ಜಾತ್ರಾ ಮಹೋತ್ಸವ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಜುಲೈ 29 ರಂದು ಮುಂಜಾನೆ ಶ್ರೀನಾಗೇಂದ್ರಸ್ವಾಮಿಗೆ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಪವಮಾನ ಅಭಿಷೇಕದೊಂದಿಗೆ ವಿಶೇಷ ಹೂವಿನ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಜರುಗಲಿದೆ.

ವರ್ಷದಲ್ಲಿ ಎರಡು ಬಾರಿ ಇಲ್ಲಿ ಜಾತ್ರಾ ಮಹೋತ್ಸವ ನಡೆಯುವುದು ವಿಶೇಷವಾಗಿದ್ದು ಬೇಡಿ ಬರುವ ಭಕ್ತರ ಅಶೋತ್ತರಗಳನ್ನು ಈಡೇರಿಸುವ ಕರುಣಾಮೂರ್ತಿ ನಾಗೇಂದ್ರ ಸ್ವಾಮಿಯು ಕಂಕಣ ಭಾಗ್ಯ, ಸಂತಾನ ಭಾಗ್ಯ ಕರುಣಿಸಲೆಂದು ಹಾಗೂ ಬೆಳೆ ಸಂವೃದ್ದಿಯಾಗಿ ಬರಲೆಂದು ಪ್ರಾರ್ಥಿಸಿ ದೇವರಿಗೆ ಹರಕೆ ಮಾಡಿಕೊಂಡು ಪೂಜೆ ಸಲ್ಲಿಸಲಾಗುತ್ತದೆ.


ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಾಗರಪಂಚಮಿ

ರಿಪ್ಪನ್‌ಪೇಟೆ ; ಇಲ್ಲಿನ ತಿಲಕ್ ನಗರದ ಶ್ರೀ ರಕ್ತೇಶ್ವರಿ ಅಮ್ಮನವರ ಮತ್ತು ನಾಗದೇವರ ಸನ್ನಿಧಿಯಲ್ಲಿ ಜುಲೈ 29 ರಂದು ಮಂಗಳವಾರ ನಾಗರಪಂಚಮಿಯಂದು ಬೆಳಗ್ಗೆ 8 ಗಂಟೆಯಿಂದ ವಿಶೇಷ ಪೂಜಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 29 ರಂದು ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನಾಗದೇವರಿಗೆ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಪವಮಾನ ಅಭಿಷೇಕದೊಂದಿಗೆ ವಿಶೇಷ ಹೂವಿನ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಜರುಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಳಲಿಮಠದಲ್ಲಿ ನಾಗರಪಂಚಮಿ

ರಿಪ್ಪನ್‌ಪೇಟೆ ; ಕೋಣಂದೂರು ಮಳಲಿ ಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿಯವರ ದಿವ್ಯಸಾನಿಧ್ಯದಲ್ಲಿ ಜುಲೈ 29 ರಂದು ನಾಗರ ಪಂಚಮಿಯ ಅಂಗವಾಗಿ ಮೂಲ ನಾಗಾರ್ಜುನಸ್ವಾಮಿಗೆ ಕ್ಷೀರಾಭಿಷೇಕ ವಿಶೇಷ ಪೂಜಾ ಕೈಂಕರ್ಯ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಜುಲೈ 29 ರಂದು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಮೂಲ ನಾಗಾರ್ಜುನ ಸ್ವಾಮಿಗೆ ಕ್ಷೀರಾಭಿಷೇಕ, ಎಳನೀರು ಅಭಿಷೇಕ ವಿಶೇಷ ಹೂವಿನ ಅಲಂಕಾರ ಪೂಜೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಮಠದ ಸಮಸ್ತ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗಾರ್ಜುನ ಸ್ವಾಮಿಯ ದರ್ಶನಾರ್ಶಿವಾದ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Comment