ಹೊಸನಗರ

ಆಗಸ್ಟ್ 17ಕ್ಕೆ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಜಾತ್ರಾ ಮಹೋತ್ಸವ

ಆಗಸ್ಟ್ 17ಕ್ಕೆ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಜಾತ್ರಾ ಮಹೋತ್ಸವ – InShot 20260807 110841079

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಆಗಸ್ಟ್ 17 ರಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ವರ್ಷದಲ್ಲಿ ಎರಡು ಬಾರಿ ನಾಗರ ಪಂಚಮಿಯಂದು ಜರುಗಲಿರುವ ಈ ಜಾತ್ರಾ ಮಹೋತ್ಸವ ಇಲ್ಲಿನ ವಿಶೇಷವಾಗಿದೆ. ಅಂದು ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀನಾಗೇಂದ್ರ ಸ್ವಾಮಿಗೆ ಎಳನೀರು, ಕ್ಷೀರ, ಪಂಚಾಮೃತ ಅಭಿಷೇಕ, ಪವಮಾನ ಪೂಜೆ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಮಂಗಳಾರತಿ ಜರುಗಲಿದ್ದು ಸಕಲ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆಯುವಂತೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]