ತೀರ್ಥಹಳ್ಳಿ ; ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೋರ್ವಳು ಮಾತ್ರೆಗಳನ್ನು ಸೇವಿಸಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ, ತನ್ನ ಕುಟುಂಬದಲ್ಲಿ ನಡೆದ ಸಣ್ಣದೊಂದು ಗಲಾಟೆಯಿಂದ ಬೇಸತ್ತು ಮಾತ್ರೆಗಳನ್ನು ಸೇವಿಸಿದ್ದಾರೆ. ನಂತರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಕೆಯನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ನಂತರ ಮಹಿಳೆಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಾರದ ಕಾರಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.