ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ನಡೆದಿದೆ.
ಸತ್ಯನಾರಾಯಣ ಕೈಸೋಡಿ (50) ಮೃ*ತ ರೈತ. ಕಣ್ಣೂರಿನ ತನ್ನ ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ಸತ್ಯನಾರಾಯಣ ಆಕಸ್ಮಿಕವಾಗಿ ಕಾಲುಜಾರಿ ಬಿದ್ದಾನೆ. ತಕ್ಷಣ ಸತ್ಯನಾರಾಯಣ್ ಗೆ ಸಮೀಪದ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಆದರೆ ಅಷ್ಟೊತ್ತಿಗಾಗಲೇ ಸತ್ಯನಾರಾಯಣ್ ಮೃ*ತಪಟ್ಟಿದ್ದರು.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.