Hosanagara

HOSANAGARA | ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

HOSANAGARA | ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ (52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ‌ ಶರಣಾಗಿದ್ದಾನೆ.

ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಿದಾಗ ವಿಷದ ವಾಸನೆ ಬಂದಿದ್ದು, ತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾನೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು ಜಮೀನಿದ್ದು, ಕೃಷಿಗಾಗಿ ಧರ್ಮಸ್ಥಳ ‌ಸಂಘ, ನಗರ ನೀಲಕಂಠೇಶ್ವರ ಸಹಕಾರ ಸಂಘ, ಜಯನಗರ ಉಜ್ಜೀವನ್ ಫೈನಾನ್ಸ್, ರಿಪ್ಪನ್‌ಪೇಟೆಯ ಚೈತನ್ಯ ಗ್ರಾಮೀಣ ಬ್ಯಾಂಕ್, ಮೂಕಾಂಬಿಕ ಸ್ವಸಹಾಯ ಸಂಘ ಸೇರಿದಂತೆ, ತನ್ನ ಹಾಗೂ ಪತ್ನಿ ಹೆಸರಲ್ಲಿ 6.5 ಲಕ್ಷ ರೂ. ಸಾಲ ಪಡೆದಿದ್ದಾನೆ. ಕೃಷಿಯಲ್ಲಿ ಹೆಚ್ಚಿನ ಆದಾಯ ಬಾರದ ಕಾರಣ ಸಾಲಬಾಧೆಗೆ ತುತ್ತಾಗಿ ಕೊನೆಗೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನ ಪುತ್ರ ಅಮಿತ್ ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಿವಾನಂದ ಕೋಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>