SHIVAMOGGA ; ತಾಲೂಕಿನ ಹಾಡೋನಹಳ್ಳಿ ಸೇರಿದಂತೆ ಹಲವೆಡೆ ಭಾರಿ ಪ್ರಮಾಣದ ಅಡಿಕೆ ಕಳ್ಳತನ ನಡೆಯುತ್ತಿದ್ದು, ಬೆಳೆಗಾರರು ಆತಂಕಗೊಂಡಿದ್ದಾರೆ.
ಅಲ್ಲಿನ ಗಂಗಾಧರ್ ಕಡೇಮನೆ ಎಂಬುವರ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಅಡಿಕೆಯನ್ನು ಮಧ್ಯರಾತ್ರಿ ಅಡಿಕೆ ಮನೆಯಿಂದ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲಿನ ಬಹಳಷ್ಟು ಕಡೆ ಅಡಿಕೆ ಕಳ್ಳತನ ನಡೆಯುತ್ತಿದ್ದು, ಅಡಿಕೆ ಬೆಳೆಗಾರರು ಆರೋಪಿಗಳ ಪತ್ತೆಗೆ ಹಾಗೂ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

ಹಾಡೋನಹಳ್ಳಿ ಜಗದೀಶ್ ಆಗ್ರಹ
ಇಲ್ಲಿ ನಿರಂತರವಾಗಿ ನಡೆಯುತ್ತಿರುವ ಈ ಭಾಗದ ಅಡಿಕೆ ಕಳ್ಳತನಕ್ಕೆ ಸೂಕ್ತ ಬ್ರೇಕ್ ಹಾಕುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಹಾಡೋನಳ್ಳಿ ಜಗದೀಶ್ ಒತ್ತಾಯಿಸಿದ್ದಾರೆ.
ಈ ಭಾಗದ ಗ್ರಾಮಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಡಿಕೆ ಕಳತನವನ್ನು ತಪ್ಪಿಸಲು ಸರ್ಕಾರ ಪ್ರತಿ ಗ್ರಾಮಗಳ ಮುಖ್ಯ ರಸ್ತೆಗಳಿಗೆ ಕನಿಷ್ಠ ಒಂದೆರಡು ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಅವರು ಒತ್ತಾಯಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.