Hosanagara

ರೈತರೇ ಗಮನಿಸಿ, ಈ ದಿನಾಂಕದೊಳಗೆ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಆಧಾರ್ ಲಿಂಕ್ ಮಾಡೋದು ಕಡ್ಡಾಯ, ನಿರ್ಲಕ್ಷ್ಯ ಮಾಡಿದ್ರೆ ಏನಾಗುತ್ತೆ ಗೊತ್ತಾ ?

HOSANAGARA | ಹೊಸನಗರ ಉಪವಿಭಾಗದ ವ್ಯಾಪ್ತಿಯ ಎಲ್ಲಾ ಕೃಷಿ ನೀರಾವರಿ ಪಂಪ್‌ಸೆಟ್ ಸ್ಥಾವರಕ್ಕೆ ಸರ್ಕಾರದ ಸಬ್ಸಿಡಿ ಸೌಲಭ್ಯ ಪಡೆಯುವ ಸಲುವಾಗಿ ಆಧಾರ್ ಕಾರ್ಡ್ ಜೋಡಣೆ ಮಾಡಬೇಕಾಗಿರುವುದು ಕಡ್ಡಾಯವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗ್ರಾಹಕರು ಮೆಸ್ಕಾಂ ಉಪವಿಭಾಗ ಕಛೇರಿ ಹೊಸನಗರ, ರಿಪ್ಪನ್‌ಪೇಟೆ ಶಾಖಾ ಕಛೇರಿ ಹಾಗೂ ನಗರ ಶಾಖಾ ಕಛೇರಿಗಳಿಗೆ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಧಾರ್ ಲಿಂಕ್ ಇರುವ ಮೊಬೈಲ್ ನೊಂದಿಗೆ ಜು.13 ರೊಳಗೆ ಖುದ್ದು ಹಾಜರಾಗಿ ಆಧಾರ್ ಲಿಂಕ್ ಮಾಡಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಪತ್ರಿಕಾ ಪ್ರಕಟಣೆ ಮೂಲಕ ಹೊಸನಗರ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>