ಕೋಡೂರಿನಲ್ಲಿ ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗಂಭೀರ ಗಾಯ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಬೆಳ್ಳಂಬೆಳಗ್ಗೆ ಕೋಡೂರಿನ ಪ್ರೌಢ ಶಾಲೆ ಬಳಿ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1DeZD9qCt7/

ಹೊಸನಗರದಿಂದ ಬರುತ್ತಿದ್ದ ಗಜಾನನ ಬಸ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೆ ಚಾಲಕ, ಓರ್ವ ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಘಟನೆ ನಡೆಯುತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಬಸ್‌ನಲ್ಲಿದ್ದ ಗಾಯಾಳು ಪ್ರಯಾಣಿಕರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment