Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ ವ್ಯಕ್ತಿ. ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಸಾಗರ ಮೂಲದ ಕ್ರೇಟಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಬೈಕ್ ಸವಾರ ರಾಜು ರಸ್ತೆ ಮೇಲೆ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿ ಗಾಯಾಳುವಿನ ರಕ್ಷಣೆಗೆ ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯನಿಮಿತ್ತ ತೀರ್ಥಹಳ್ಳಿಗೆ ತೆರಳಿ ಹಿಂದಿರುಗುತ್ತಿದ್ದ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವಿನ ಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸಮಯ ಪ್ರಜ್ಞೆ ತೋರಿದ ಅವರು ಗಾಯಾಳುವನ್ನು ಸಮಾಧಾನಪಡಿಸಿ ತಕ್ಷಣವೇ ಖಾಸಗಿ ವಾಹನದ ಮೂಲಕ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಗಾಯಾಳುವಿಗೆ ರಿಪ್ಪನ್‌ಪೇಟೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ತಲೆಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!