ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಸ್ಪಾಡಿಯಿಂದ ಆನಂದಪುರ ಕಡೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ ಮತ್ತು ಆನಂದಪುರದಿಂದ ಸಾಗರದ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಶ್ರೀನಿವಾಸ್ (29) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಅವರನ್ನು ತುರ್ತು ಚಿಕಿತ್ಸೆಗಾಗಿ ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

