Accident

ತೀರ್ಥಹಳ್ಳಿ ; ನಾಲೂರು ಬಳಿ ಭೀಕರ ಅಪಘಾತ – ಸ್ಥಳದಲ್ಲೇ ಮಹಿಳೆ ಸಾವು

ತೀರ್ಥಹಳ್ಳಿ : ನಾಲೂರು ಸಮೀಪ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದ ಸಮೀಪ ಇರುವ ಶಬರಿ ಹೋಟೆಲ್ ಮಾಲೀಕರಾದ ಸುದರ್ಶನ್ ಅವರು ಕುಟುಂಬ ಸಮೇತ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಟೋದಲ್ಲಿ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುವ ವೇಳೆ, ನಾಲೂರು ಸಮೀಪದ ತಿರುವಿನಲ್ಲಿ ಆಟೋ ಚಾಲಕನ ಅಜಾಗರೂಕ ಚಾಲನೆಯಿಂದ ಕಬ್ಬಿಣದ ಡಿವೈಡರ್‌ (ತಡೆಗೋಡೆ)ಗೆ ವಾಹನ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಆಟೋದ ಬಲಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಸುದರ್ಶನ್ (35) ಹಾಗೂ ಅವರ ಪುತ್ರ ಸಂಚಿತ್ (7) ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕುರುವಳ್ಳಿ ಗ್ರಾಮದ ಯಲ್ಲಪ್ಪ ಎಂಬ ಆಟೋ ಚಾಲಕನ ವಿರುದ್ಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.

ಯೋಧ ಗೋರಗದ್ದೆ ಜಿ.ಎಸ್. ಮಂಜುನಾಥ್ ಪ್ರಥಮ ಪುಣ್ಯಸ್ಮರಣೆ : ಮರೀಚಿಕೆಯಾದ ಸರ್ಕಾರದ ಭರವಸೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!