RIPPONPETE ; ಹೊಸನಗರ – ಆಯನೂರು ನಡುವಿನ ಸೂಡೂರು ಗೇಟ್ ಬಳಿಯ ಸೂಡೂರು ಭೂತರಾಯನ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಾರುತಿ ಆಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ.

ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಬಳಿಯ ಕೆಂಚನಾಲ, ತಳಲೆ ಮತ್ತು ಕಳಸೆ ಮೂಲದವರು ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಮೂವರು ಅಮೃತ (ಗರ್ತಿಕೆರೆ) ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಂದು ಕಾಲೇಜಿಗೆ ರಜೆ ಇದ್ದ ಕಾರಣ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ ಊರಿಗೆ ವಾಪಾಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ.
108 ಆಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದರು ಆಂಬುಲೆನ್ಸ್ ಬಾರದೇ ಗಾಯಾಳುಗಳು ಒದ್ದಾಡುತ್ತಿರುವ ದೃಶ್ಯ ಮನಕಲುಕುವಂತಿದೆ.
ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.