Chikkamagaluru

ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಬಂಧನ !

ಕೊಪ್ಪ ; ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿದ್ದ ಆರೋಪಿಯನ್ನು ತಾಲೂಕಿನ ಜಯಪುರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಾಳೂರು ಸಮೀಪದ ಚಂದುವಳ್ಳಿಯ ಭವಿತ್ ಅಲಿಯಾಸ್ ರಮೇಶ್ (30) ಬಂಧಿತ ಆರೋಪಿ. ಭವಿತ್ ಶಿಕ್ಷಕಿಯ ಹತ್ತಿರ ಸಂಬಂಧಿಯಾಗಿದ್ದು ಈತ ಆಕೆಯ ಜೊತೆ ಸಂಪರ್ಕದಲ್ಲಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ತಲೆಗೆ ಹೊಡೆದು ಸೀರೆ ಬಿಚ್ಚಿ ಅದರಿಂದಲೇ ಮರಕ್ಕೆ ನೇಣು ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಈ ಮೂಲಕ ಶಿಕ್ಷಕಿಯ ಮೇಲೆ ಹಲ್ಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರ ಕೂಗಾಟ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಮನೆಯವರು ರಕ್ಷಣೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]