SHIKARIPURA ; ಆಸ್ತಿ ವಿಚಾರಕ್ಕೆ ತಂದೆ ಮಗನ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ.
ಗಂಗಾನಾಯ್ಕ್ (36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ.

ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಡಿವೈಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

