Categories: Featured-Article

ಈಶ್ವರಪ್ಪನವರದೇ ಒರಿಜಿನಲ್ ಬಿಜೆಪಿ

ತೀರ್ಥಹಳ್ಳಿ : ಈಶ್ವರಪ್ಪನವರದೇ ಒರಿಜಿನಲ್ ಬಿಜೆಪಿ ಎಂದು ಬೆಜ್ಜವಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮೇಲಿನಕೊಪ್ಪ ಮಹೇಶ್ ಹೇಳಿದ್ದಾರೆ.

ಪಟ್ಟಣದ ಅನ್ನಪೂರ್ಣ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿ.ಎಸ್.ವೈ ಕುಟುಂಬ ರಾಜಕಾರಣಕ್ಕೆ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಬಲಿಯಾಗಿದ್ದಾರೆ. ಬಿಜೆಪಿ ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಮರೆತು ಕಾಂಗ್ರೆಸ್ ಸಂಸ್ಕೃತಿಯನ್ನು ಅಳವಡಿಸಿಕೊಂಡಿದೆ. ಅದಕ್ಕಾಗಿ ರಾಷ್ಟ್ರಭಕ್ತರ ಬಳಗದ ಹೆಸರಿನಲ್ಲಿ ಹಿಂದೂ ಹುಲಿ ಕೆ.ಎಸ್ ಈಶ್ವರಪ್ಪನವರು ಸ್ಪರ್ಧಿಸುತ್ತಿದ್ದು ತೀರ್ಥಹಳ್ಳಿಯ ಬಜರಂಗದಳ ಆರ್.ಎಸ್‌.ಎಸ್ ಹಾಗೂ ಹಿಂದೂ ಮುಖಂಡರು ಸೇರಿದಂತೆ ರಾಷ್ಟ್ರೀಯತೆಯನ್ನು ಮತ್ತು ಹಿಂದುತ್ವವನ್ನು ಕಾಪಾಡಲು ಹಲವಾರು ಯುವಕರು ಈಶ್ವರಪ್ಪನವರಿಗೆ ಬೆಂಬಲ ನೀಡುತ್ತಿದ್ದೇವೆ ಎಂದರು.

ಈಗಲೂ ಕಾಲ ಮಿಂಚಿಲ್ಲ. ಬಿಜೆಪಿ ಹೈಕಮಾಂಡ್ ತಕ್ಷಣ ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಹುದ್ದೆಯನ್ನು ಹಿಂಪಡೆಯಬೇಕು. ಸಂಸದ ಬಿ.ವೈ.ಆರ್ ಕಣದಿಂದ ನಿವೃತ್ತಿಯಾಗಿ ಈಶ್ವರಪ್ಪನವರನ್ನು ಲೋಕಸಭಾ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ, ಪ್ರತಾಪ್ ಸಿಂಹ ಮೊದಲಾದ ಹಿಂದೂ ನಾಯಕರಿಗೆ ವಂಚಿಸಲಾಗಿದೆ. ಗೋಬ್ಯಾಕ್ ಶೋಭಾ ಅವರಿಗೆ ಬೆಂಗಳೂರು ಉತ್ತರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಂಸದ ಬಿ ವೈ ರಾಘವೇಂದ್ರ ಅವರದ್ದು ಭಾಷಣದಲ್ಲಿ ಮಾತ್ರ ಹಿಂದುತ್ವ. ವೈಯಕ್ತಿಕ ಲಾಭಕ್ಕಾಗಿ ಇತ್ತೀಚೆಗೆ ಪಕ್ಷ ಸೇರಿದ ಬೇರೆ ಪಕ್ಷದವರಿಗೆ ಸ್ಥಾನ ಮಾನ ನೀಡಲಾಗುತ್ತಿದೆ. ಇವರ ಹಿಂದುತ್ವವಾದ ಮತ್ತು ರಾಷ್ಟ್ರೀಯತೆ ಬರೆ ಬೊಗಳೆ ಅಷ್ಟೇ. ಕುಟುಂಬ ರಾಜಕಾರಣವನ್ನು ವಿರೋಧಿಸಿ ಬಿಜೆಪಿಯ ಸಿದ್ಧಾಂತವನ್ನು ಕಾಪಾಡಲು ನಾವೆಲ್ಲರೂ ಈಶ್ವರಪ್ಪನವರನ್ನು ಬೆಂಬಲಿಸುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬಜರಂಗದಳ ಮತ್ತು ಹಿಂದೂ ಪರ ಸಂಘಟನೆ ಯುವಕರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago