Categories: Featured-Article

ನವದುರ್ಗಾ – ನವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ

ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭಮನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.

ಶೈಲಪುತ್ರಿ : 
‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

ಬ್ರಹ್ಮಚಾರಿಣಿ : 
‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.

ಚಂದ್ರಘಂಟಾ : 
‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.

ಕೂಷ್ಮಾಂಡಾ : 
‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಧ್ವನಿ. ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ಇದರ ಅರ್ಥವು ಹೀಗಿದೆ : ತ್ರಿವಿಧತಾಪಗಳೆಂದರೆ ಉತ್ಪತ್ತಿ, ಸ್ಥಿತಿ ಮತ್ತು ಲಯ. ‘ಮೃತ್ಯು ಅಂದರೆ ಅನಿಶ್ಚಿತ ಕಾಲಾವಧಿಯ ವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.

ಸ್ಕಂದಮಾತಾ : 
‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ‘ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತಾ ಎನ್ನುತ್ತಾರೆ.

ಕಾತ್ಯಾಯನಿ : 
‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ ಸಹಾಯ ಮಾಡಿದಳು.

ಜಗತ್ಪ್ರಸಿದ್ಧ ಅಮೇರಿಕನ್ ಶಾಸ್ತ್ರಜ್ಞರಾದ ಡಾ.ಕಾರ್ಲ್ ಸೇಗನ್ ಹೇಳುತ್ತಾರೆ, ‘ಓರ್ವ ಹೆಸರಾಂತ ರಷ್ಯಾದ ವೈಜ್ಞಾನಿಕರು ಮಾಡಿರುವ ಸಂಶೋಧನೆಯಲ್ಲಿ ಕಂಡು ಬಂದಿರುವುದೇನೆಂದರೆ ಕೆಲವು ಸ್ಪಂದನಗಳು ಅವಕಾಶದಲ್ಲಿ ಅಘನೀಕರಣಗೊಂಡು ಪುನಃ ಯಾವಾಗ ಬೇಕಾದರೂ ಅವುಗಳ ಘನೀಕರಣವಾಗುತ್ತದೆ; ಆದರೆ ಈ ಪ್ರಕ್ರಿಯೆಯು ಯಾವ ವಿಧದಿಂದ ಆಗುತ್ತದೆ ಎಂಬುದನ್ನು ಈಗಲೂ ಖಚಿತವಾಗಿ ಹೇಳಲು ಆಗುವುದಿಲ್ಲ.’

ಕಾಳರಾತ್ರಿ : 
ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ ಅಥವಾ ಪ್ರಾಣಿಗಳ ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ ‘ಕಾಳರಾತ್ರಿ’. ‘ವಿನಾಶಿಕಾ’ ಅಂದರೆ ‘ವಿಶೇಷೇಣ ನಾಶಯತಿ ಇತಿ|’ ವಿಶೇಷ ಎಂದರೆ ‘ವಿಗತಃ ಶೇಷಃ ಯಸ್ಮಾತ್|’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.

ಮಹಾಗೌರಿ :
 ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ‘ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ‘ಆ’ ಅಂದರೆ ‘ವರೆಗೆ’ ಮತ್ತು ‘ಧಿ’ ಅಂದರೆ ‘ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’.

ಸಿದ್ಧಿದಾತ್ರಿ :
 ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.’

(ಆಧಾರ ಗ್ರಂಥ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ಶಕ್ತಿ)

ಸಂಗ್ರಹ :

ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

15 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

19 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

19 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

22 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

22 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago