Categories: Featured-Article

ಯೋಜನೆಗಳನ್ನು ಜವಾಬ್ದಾರಿಯಿಂದ ಬಳಸಿಕೊಂಡಾಗ ಸಾರ್ಥಕ ; ಮಧು ಬಂಗಾರಪ್ಪ

ಶಿವಮೊಗ್ಗ: ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು.

ಶಿವಮೊಗ್ಗ ಸ್ಪಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಇಂದು ಸಾರ್ವಜನಿಕರಿಗೆ ಮುಕ್ತಗೊಳಿಸಿ ಅವರು ಮಾತನಾಡಿದರು.

ಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್‌ ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ. ಈ ಯೋಜನೆಯ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಸಾರ್ವಜನಿಕರು ತುಂಗಾ ನದಿ ಉದ್ಯಾನವನದಲ್ಲಿ ಓಡಾಡಬೇಕು. ಆಗ ಮಾತ್ರ ಉದ್ಯಾನವನ ನಿರ್ಮಾಣ ಸಾರ್ಥಕವಾಗುತ್ತದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.50.50 ಅನುದಾನದಲ್ಲಿ ಕೆಲಸಗಳು ನಡೆದಿದ್ದು, ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್‍ನ್ನು ರೂ.103 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾರ್ವಜನಿಕರು ಈ ಯೋಜನೆಗಳನ್ನು ತಮ್ಮ ಆಸ್ತಿ ಎಂದು ಅರಿತು ಸ್ವಚ್ಚತೆ ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು. ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ರಕ್ಷಣಾ ವ್ಯವಸ್ಥೆ, ಸಿಸಿಟಿವಿ ಅವಳವಡಿಸುವುದು, ರಾತ್ರಿ ವೇಳೆ ವಿದ್ಯುದ್ದೀಪ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ನೊಡಿಕೊಳ್ಳಬೇಕು ಎಂದರು.

ಉದ್ಯಾನವನ ನಿರ್ವಹಣೆಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಪ್ರವೇಶ ಶುಲ್ಕ ತೆಗೆದುಕೊಳ್ಳುವ ಬಗ್ಗೆ ಸ್ಮಾರ್ಟ್‍ಸಿಟಿ ಎಂಡಿ ಯವರು ನಿರ್ಧರಿಸುವರು. ಇಲ್ಲಿ ಹಸಿರು, ಸ್ವಚ್ಚತೆ, ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನಿಡಬೇಕು. ಅಂಗಡಿ, ಜಾಹಿರಾತು, ಮಳಿಗೆಗಳಿಗೆ ಅವಕಾಶ ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು. ಹಾಗೂ ಉತ್ತಮವಾಗಿ ನಿರ್ವಹಣೆ ಮಾಡಬೇಕೆಂದು ಹೇಳಿದರು.

ನಗರದ ಹೃದಯಭಾಗ ಶಿವಪ್ಪನಾಯಕ ವೃತ್ತದಲ್ಲಿ ಪಾಲಿಕೆಗೆ ಹೊಂದಿಕೊಂಡಂತೆ ಹೂವು ಹಣ್ಣು ಮಾಕುಟ್ಟೆಗಾಗಿ 118 ಮಳಿಗೆ, ಮಲ್ಟಿಲೆವೆಲ್ ಕಾರ್‍ಪಾರ್ಕಿಂಗ್‍ಗೆ ಒಟ್ಟು 172 ಕಾರು ಮತ್ತು 78 ಬೈಕ್ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ಸ್ಮಾರ್ಟ್‍ಸಿಟಿ ಕಾಮಗಾರಿಗಳು ಉತ್ತಮವಾಗಿ ಆಗಿದ್ದು ಇಂದು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕಾರ್ಯ ನಡೆದಿದೆ. ಈ ಸ್ಮಾರ್ಟ್‌ ಸಿಟಿ ಯೋಜನೆ ಮಂಜೂರಾತಿ ಮತ್ತು ಅನುಷ್ಟಾನದಲ್ಲಿ ಅನೇಕರ ನಾಯಕರ ಪ್ರಯತ್ನ ಮತ್ತು ಶ್ರಮವಿದೆ.

ನಗರದ 6 ವಾರ್ಡ್‌ಗಳಲ್ಲಿ ಪೂರ್ಣ ಪ್ರಮಾಣ ಮತ್ತು 9 ವಾರ್ಡುಗಳಲ್ಲಿ ಭಾಗಶಃ ಸ್ಮಾರ್ಟ್‍ಸಿಟಿ ಕೆಲಸಗಳು ಆಗಿವೆ. ಮುಂದಿನ ಹಂತದಲ್ಲಿ ಇತರೆ ವಾರ್ಡುಗಳನ್ನು ಪರಿಗಣಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಮಹಾನಗರಪಾಲಿಕೆ ಮಾಜಿ ಸದಸ್ಯ ಯೋಗೇಶ್, ಗನ್ನಿ ಶಂಕರ್, ಧೀರರಾಜ್ ಹೊನ್ನವಿಲೆ, ಶಬನಾ ಖಾನಂ, ಸ್ವತಂತ್ರ ನಿರ್ದೇಶಕಿ ಲಕ್ಷ್ಮಿ ಗೋಪಿನಾಥ್, ಸ್ಪಾರ್ಟ್ ಸಿಟಿ ಎಂಡಿ ಕೆ. ಮಾಯಾಣ್ಣಗೌಡ, ಮುಖ್ಯಇಂಜನಿಯರ್ ರಂಗನಾಥ ಮತ್ತು ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

Malnad Times

Share
Published by
Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago