Categories: Featured-Article

ಶ್ರಾದ್ಧವನ್ನು ಮಾಡುವುದರ ಮಹತ್ವ – ಪಿತೃಪಕ್ಷದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ

‘ಶ್ರಾದ್ಧ’ ಎಂದು ಹೇಳಿದೊಡನೆ ಇಂದಿನ ವಿಜ್ಞಾನಯುಗದ ಯುವಪೀಳಿಗೆಯ ಮನಸ್ಸಿನಲ್ಲಿ ‘ಅಶಾಸ್ತ್ರೀಯ ಮತ್ತು ಅವಾಸ್ತವ ಕರ್ಮಕಾಂಡದ ಆಡಂಬರ’ ಎಂಬ ತಪ್ಪುಕಲ್ಪನೆಯು ಮೂಡುತ್ತದೆ. ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮವನ್ನು ಅರ್ಥಮಾಡಿಕೊಳ್ಳುವಲ್ಲಿನ ಅನಾಸಕ್ತಿ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ, ಹಿಂದೂ ವಿರೋಧಿ ಸಂಘಟನೆಗಳಿಂದ ಹಿಂದೂ ಧರ್ಮದ ರೂಢಿ-ಪರಂಪರೆಗಳ ಮೇಲೆ ಸತತವಾಗಿ ಆಗುತ್ತಿರುವ ದ್ವೇಷಪೂರ್ವಕ ಟೀಕೆ ಇತ್ಯಾದಿಗಳಿಂದ ಈ ಪರಿಣಾಮವಾಗಿದೆ. ಶ್ರಾದ್ಧದ ವಿಷಯದಲ್ಲಿ ಮುಂದಿನ ವಿಚಾರಸರಣಿಯು ಸಮಾಜದಲ್ಲಿ ಕಂಡುಬರುತ್ತದೆ. ಪೂಜೆ ಅರ್ಚನೆ, ಶ್ರಾದ್ಧಪಕ್ಷ ಮುಂತಾದವುಗಳ ಮೇಲೆ ವಿಶ್ವಾಸವನ್ನಿಡದ ಅಥವಾ ಸಮಾಜಕಾರ್ಯವೇ ಸರ್ವ ಶ್ರೇಷ್ಠವಾಗಿದೆ ಎಂದು ಹೇಳುವವರು ಪಿತೃಗಳಿಗಾಗಿ ಶ್ರಾದ್ಧವಿಧಿಗಳನ್ನು ಮಾಡದೇ ಅದರ ಬದಲು, ‘ಬಡವರಿಗೆ ಅನ್ನದಾನ ಮಾಡುವೆವು ಅಥವಾ ಶಾಲೆಗಳಿಗೆ ಸಹಾಯ ಮಾಡುವೆವು’ ಎಂದು ಹೇಳುತ್ತಾರೆ ! ಅನೇಕ ಜನರು ಇದೇ ರೀತಿ ಮಾಡುತ್ತಾರೆ ! ಹೀಗೆ ಮಾಡುವುದೆಂದರೆ, ‘ಒಬ್ಬ ರೋಗಿಗೆ ಶಸ್ತ್ರಚಿಕಿತ್ಸೆ ಮಾಡದೇ, ಅದರ ಬದಲು ನಾವು ಬಡವರಿಗೆ ಅನ್ನದಾನ ಮಾಡುವೆವು, ಶಾಲೆಗೆ ಸಹಾಯ ಮಾಡುವೆವು’ ಎಂದು ಹೇಳಿದಂತೆಯೇ ಆಗಿದೆ. ಶ್ರಾದ್ಧದಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವಂತಹ ಸೂಕ್ಷ್ಮಶಕ್ತಿಯು ಒಳಗೊಂಡಿರುತ್ತದೆ; ಅದರಿಂದಾಗಿ ಪಿತೃಗಳಿಗೆ ಗತಿ ಸಿಗಲು ಸಾಧ್ಯವಾಗುತ್ತದೆ. ಹಾಗಾಗಿ ಮೇಲಿನ ಹೇಳಿಕೆಗಳು ಹಾಸ್ಯಾಸ್ಪದವೆನಿಸಿಕೊಳ್ಳುತ್ತವೆ.

ಹಿಂದೂಧರ್ಮದಲ್ಲಿ ಹೇಳಿರುವ ಈಶ್ವರಪ್ರಾಪ್ತಿಯ ಮೂಲಭೂತ ಸಿದ್ಧಾಂತಗಳಲ್ಲಿ ‘ದೇವಋಣ, ಋಷಿಋಣ, ಪಿತೃಋಣ ಮತ್ತು ಸಮಾಜಋಣವನ್ನು ತೀರಿಸುವುದು’ ಒಂದು ಮುಖ್ಯ ಉದ್ದೇಶವಾಗಿದೆ. ಇವುಗಳಲ್ಲಿ ಪಿತೃಋಣವನ್ನು ತೀರಿಸಲು ‘ಶ್ರಾದ್ಧಕರ್ಮ’ವು ಆವಶ್ಯಕವಾಗಿದೆ. ತಂದೆತಾಯಿ ಮತ್ತು ಸಂಬಂಧಿಕರ ಮರಣೋತ್ತರ ಪ್ರಯಾಣವು ಸುಖಕರ ಮತ್ತು ಕ್ಲೇಶರಹಿತವಾಗಿ, ಅವರಿಗೆ ಸದ್ಗತಿಯು ಸಿಗಬೇಕೆಂದು ಮಾಡಬೇಕಾದ ಸಂಸ್ಕಾರಕ್ಕೆ ‘ಶ್ರಾದ್ಧ’ ಎನ್ನುತ್ತಾರೆ. ಶ್ರಾದ್ಧಕರ್ಮಗಳಲ್ಲಿನ ಮಂತ್ರೋಚ್ಚಾರಗಳಲ್ಲಿ ಪಿತೃಗಳಿಗೆ ಗತಿ ನೀಡುವ ಸೂಕ್ಷ್ಮಶಕ್ತಿ ಇದೆ. ಶ್ರಾದ್ಧಕರ್ಮಗಳಲ್ಲಿ ಪಿತೃಗಳಿಗೆ ಹವಿರ್ಭಾಗವನ್ನು ಕೊಡುವುದರಿಂದ ಅವರು ಸಂತುಷ್ಟರಾಗುತ್ತಾರೆ. ಶ್ರಾದ್ಧವನ್ನು ಮಾಡದಿದ್ದರೆ ಪಿತೃಗಳ ಆಸೆಗಳು ಅತೃಪ್ತವಾಗಿ ಉಳಿಯುತ್ತವೆ ಮತ್ತು ಈ ವಾಸನಾಯುಕ್ತ ಪಿತೃಗಳು ದುಷ್ಟ ಶಕ್ತಿಗಳ ಅಧೀನಕ್ಕೊಳಪಟ್ಟು ಅವರ ಗುಲಾಮರಾಗುತ್ತಾರೆ. ದುಷ್ಟ ಶಕ್ತಿಗಳು ವಾಸನಾಯುಕ್ತ ಪಿತೃಗಳ ಮೂಲಕ ಕುಟುಂಬದವರಿಗೆ ತೊಂದರೆಗಳನ್ನು ಕೊಡುವ ಸಂಭವವೂ ಇರುತ್ತದೆ. ಶ್ರಾದ್ಧವನ್ನು ಮಾಡುವುದರಿಂದ ಪಿತೃಗಳು ಆ ತೊಂದರೆಗಳಿಂದ ಮುಕ್ತರಾಗುವುದಲ್ಲದೇ ನಮ್ಮ ಜೀವನವೂ ಸುಖಮಯವಾಗುತ್ತದೆ.

ಶ್ರಾದ್ಧಕ್ಕೆ ಇಷ್ಟೊಂದು ಮಹತ್ವವಿದ್ದರೂ ಇಂದು ಹಿಂದೂಗಳಲ್ಲಿರುವ ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮಶಾಸ್ತ್ರದ ಮೇಲಿನ ಅವಿಶ್ವಾಸ, ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರಣೆ ಇತ್ಯಾದಿಗಳಿಂದ ಶ್ರಾದ್ಧವಿಧಿಯು ಅಲಕ್ಷಿಸಲ್ಪಟ್ಟಿದೆ. ಶ್ರಾದ್ಧಕರ್ಮವನ್ನು ವಾಸ್ತವವಿಲ್ಲದ ಅಯೋಗ್ಯ ಕರ್ಮಕಾಂಡವೆಂದು ಪರಿಗಣಿಸಲ್ಪಡುತ್ತಿದೆ. ಆದುದರಿಂದ ಶ್ರಾದ್ಧ ಸಂಸ್ಕಾರವೂ ಇತರ ಸಂಸ್ಕಾರಗಳಷ್ಟೇ ಆವಶ್ಯಕವಾಗಿದೆ ಎಂಬುದನ್ನು ಹೇಳುವುದು ಆವಶ್ಯಕವಾಗಿದೆ.

ಶ್ರಾದ್ಧವನ್ನು ಮಾಡುವುದರಿಂದ ಪೂರ್ವಜರ ತೊಂದರೆಗಳಿಂದ ನಮ್ಮ ರಕ್ಷಣೆ ಹೇಗಾಗುತ್ತದೆ ?
‘ಶ್ರಾದ್ಧದಿಂದ ನಿರ್ಮಾಣವಾದ ಇಂಧನವು ಮೃತವ್ಯಕ್ತಿಯ ಲಿಂಗದೇಹದಲ್ಲಿನ ತ್ರಿಗುಣಗಳ ಇಂಧನಗಳೊಂದಿಗೆ ಹೋಲುತ್ತದೆ; ಆದುದರಿಂದ ಶ್ರಾದ್ಧದಿಂದ ನಿರ್ಮಾಣವಾದ ಇಂಧನವು ಲಿಂಗದೇಹಕ್ಕೆ ದೊರಕಿ ಅದು ಕಡಿಮೆ ಕಾಲಾವಧಿಯಲ್ಲಿ ಮರ್ತ್ಯಲೋಕವನ್ನು ದಾಟುತ್ತದೆ. (ಮರ್ತ್ಯಲೋಕವು ಭೂಲೋಕ ಮತ್ತು ಭುವರ್ಲೋಕಗಳ ಮಧ್ಯದಲ್ಲಿರುತ್ತದೆ.) ಮೃತ್ಯುಲೋಕವನ್ನು ದಾಟಿದ ಲಿಂಗದೇಹಗಳಿಗೆ ಪುನಃ ಪೃಥ್ವಿಯ ವಾತಾವರಣ ಕಕ್ಷೆಯಲ್ಲಿ ಬಂದು ಪೃಥ್ವಿಯ ಮೇಲಿನ ಜನರಿಗೆ ತೊಂದರೆ ಕೊಡಲು ಸಾಧ್ಯವಾಗುವುದಿಲ್ಲ. ಆದುದರಿಂದ ಶ್ರಾದ್ಧವನ್ನು ಮಾಡುವುದಕ್ಕೆ ಬಹಳ ಮಹತ್ವವಿದೆ.

ಶ್ರಾದ್ಧದಿಂದ ಆಗುವ ಲಾಭಗಳು : ಶ್ರಾದ್ಧವನ್ನು ಮಾಡುವುದರಿಂದ ಯಾವ ಫಲಪ್ರಾಪ್ತಿಯಾಗುತ್ತದೆ ಎಂಬುದರ ಬಗ್ಗೆ ಗರುಡಪುರಾಣದ ಒಂದು ಶ್ಲೋಕವು ಮುಂದಿನಂತಿದೆ –
ಆಯುಃ ಪುತ್ರಾನ್ ಯಶಃ ಸ್ವರ್ಗಂ ಕೀರ್ತಿಂ ಪುಷ್ಟಿಂ ಬಲಂ ಶ್ರಿಯಮ್ |
ಪಶುನ್ ಸೌಖ್ಯಂ ಧನಂ ಧಾನ್ಯಂ ಪ್ರಾಪ್ನುಯಾತ್ ಪಿತೃಪೂಜನಾತ್ |
ಗರುಡಪುರಾಣ, ಅಂಶ 2, ಅಧ್ಯಾಯ 10, ಶ್ಲೋಕ 57

    ಅರ್ಥ: ಆಯುಷ್ಯ, ಪುತ್ರ, ಯಶಸ್ಸು, ಸ್ವರ್ಗ, ಕೀರ್ತಿ, ಪುಷ್ಠಿ, ಬಲ, ಲಕ್ಷ್ಮೀ, ಪಶು, ಸೌಖ್ಯ, ಧನ, ಧಾನ್ಯ ಇವು ಪಿತೃಪೂಜೆಯಿಂದ, ಅಂದರೆ ಶ್ರಾದ್ಧದಿಂದ ಸಿಗುತ್ತವೆ. ಗ್ರಹಣಕಾಲದಲ್ಲಿ ಶ್ರಾದ್ಧವನ್ನು ಮಾಡುವುದರಿಂದ ಶ್ರಾದ್ಧ ಮಾಡಿದವನಿಗೆ ಭೂದಾನದ ಫಲ ಸಿಗುತ್ತದೆ.

    (ಆಧಾರ : ಸನಾತನ ಸಂಸ್ಥೆಯು ನಿರ್ಮಿಸಿದ ಗ್ರಂಥ ‘ಶ್ರಾದ್ಧ – 2 ಭಾಗಗಳು’)

    ಸಂಗ್ರಹ : ಶ್ರೀ. ವಿನೋದ ಕಾಮತ್,
    ರಾಜ್ಯ ವಕ್ತಾರರು, ಸನಾತನ ಸಂಸ್ಥೆ
    ಸಂಪರ್ಕ : 9342599299

    Malnad Times

    Share
    Published by
    Malnad Times
    Tags: Articles

    Recent Posts

    ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

    ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

    1 day ago

    ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

    ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

    1 day ago

    CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

    ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

    1 day ago

    ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

    ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

    1 day ago

    ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

    ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

    1 day ago

    ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

    ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

    2 days ago